ಹೆಣ್ಣು ಭ್ರೂಣ ಹತ್ಯೆ: ಗರ್ಭಿಣಿಯರ ಮೇಲೆ ನಿಗಾ ವಹಿಸಿ: ಕೆ.ನಾಗಣ್ಣಗೌಡಪ್ರತಿ ಗ್ರಾಮಗಳಲ್ಲಿರುವ ಗರ್ಭಿಣಿಯರ ಮೇಲೆ ನಿಗಾ ವಹಿಸಿ, ಅವರ ಚಲನ ವಲನಗಳ ಮೇಲೆ ಗಮನಹರಿಸಬೇಕು. ಮಹಿಳೆಯರಿಗೆ ಭ್ರೂಣ ಹತ್ಯೆಯ ದುಷ್ಪರಿಣಾಮ, ಕಾನೂನು ಹಾಗೂ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲೂಕು ಆಡಳಿತ ಅಧಿಕಾರಿಗಳು ಚುರುಕಿನಿಂದ ಕಾರ್ಯನಿರ್ವಹಿಸುವಂತೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅಧಿಕಾರಿಗಳಿಗೆ ಸೂಚಿಸಿದರು.