ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುವಾಗ ನಿಯಂತ್ರಣ ಕಳೆದುಕೊಂಡು ಮುಂದೆ ಹೋಗುತ್ತಿದ್ದ ಕ್ಯಾಂಟರ್ ವಾಹನದ ಹಿಂಭಾಗಕ್ಕೆ ತಾನೇ ಡಿಕ್ಕಿ ಹೊಡೆದುಕೊಂಡು ಸವಾರ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸರು ತಪಾಸಣೆ ನಡೆಸುವ ವೇಳೆ ಮಾಡಿದ ಎಡವಟ್ಟಿನಿಂದ ನಾಯಿಕಚ್ಚಿದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ದಂಪತಿ ಬೈಕ್ನಿಂದ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಮಗುವಿನ ತಲೆಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ನಡೆದಿದೆ.
ಪ್ರೀತಿಸಿ ಮದುವೆಯಾದ ಮೂರು ತಿಂಗಳಿಗೆ ಪತಿ ಹಾಗೂ ಆತನ ಕುಟುಂಬದ ಸದಸ್ಯರು ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ್ದಾರೆ
ಸಹ ನಟಿ ಮೇಲೆ ಅತ್ಯಾಚಾರ ಆರೋಪದಡಿ ನಟ ಮನು ಮಡೇನೂರು ಬಂಧನ ಪ್ರಕರಣದ ತನಿಖೆ ಮುಂದುವರೆದಿದ್ದು, ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಸಂತ್ರಸ್ತೆ ಹಾಗೂ ಆರೋಪಿಯ ತಲಾ ಎರಡು ಮೊಬೈಲ್ಗಳನ್ನು ಜಪ್ತಿ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(ಎಫ್ಎಸ್ಎಲ್) ಕಳುಹಿಸಿದ್ದಾರೆ.
ಮಾನಸಿಕ ಅಸ್ವಸ್ಥ ಯುವಕ ಭಾನುವಾರ ಬೆಳಗ್ಗೆ 9.30ರ ಸಮಯದಲ್ಲಿ ತನ್ನ ಹುಚ್ಚಾಟದಿಂದ ಪಿಎಸ್ಎಸ್ಕೆ ಕಾರ್ಖಾನೆ ಬಳಿಯ ರೈಲ್ವೆ ನಿಲ್ದಾಣದ ಮೇಲ್ಸೇತುವೆಯಿಂದ ಜಿಗಿದು ವಿದ್ಯುತ್ ತಂತಿ ನಡುವೆ ಸಿಲುಕಿ ಕೊಂಡಿದ್ದಾನೆ. ಈ ಸಮಯದಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.