ಸಿಲಿಂಡರ್ ಸ್ಫೋಟಕ್ಕೆ ಅಪಾರ ಹಾನಿ; ಶಾಸಕರು, ಅಧಿಕಾರಿಗಳಿಂದ ಸ್ಥಳ ಪರಿಶೀಲನೆಟೀ ಕ್ಯಾಂಟೀನ್ನಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಪಾರ ಹಾನಿಯಾಗಿ ಲಕ್ಷಾಂತರ ರು. ನಷ್ಟವಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದಿದೆ. ಘಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಚ್.ಟಿ.ಮಂಜು, ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.