ಇಬ್ಬರು ಕಂದಾಯ ಅಧಿಕಾರಿಗಳಿಗೆ ಬಂಧನ ಭೀತಿ..!ಸರ್ಕಾರಿ ಭೂಮಿಯನ್ನು ಖಾಸಗಿ ವ್ಯಕ್ತಿಗೆ ಭೂಪರಿವರ್ತನೆ ಮೂಲಕ ಪರಭಾರೆ ಮಾಡಿರುವ ಇಬ್ಬರು ಕಂದಾಯ ಅಧಿಕಾರಿಗಳ ವಿರುದ್ಧ ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಇಬ್ಬರನ್ನು ಅಭಿಯೋಜನೆಗೆ ಒಳಪಡಿಸಲು ಅನುಮತಿ ಕೋರಿ ಡಿಸಿ ಡಾ.ಕುಮಾರ ಅವರಿಗೆ ಪೊಲೀಸರು ಮನವಿ ಮಾಡಿದ್ದಾರೆ.