ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಶಾಲೆಗೆ ಅಧಿಕಾರಿಗಳ ತಂಡ ಭೇಟಿ, ಮಾಹಿತಿ ಸಂಗ್ರಹಶಾಲಾ ಶುಲ್ಕ ಪಾವತಿಸಲಿಲ್ಲ ಎಂಬ ಕಾರಣಕ್ಕೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದ ಅನಿಕೇತನ ಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಎಚ್.ಎಲ್.ಮಿಲನಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಭಾನುವಾರ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಆಡಳಿತ ಮುಖ್ಯಸ್ಥರ ವಿಚಾರಣೆ ನಡೆಸಿದರು.