ಹಣ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧನಕ್ಕೆಒಳಗಾಗಿರುವ ಐಶ್ವರ್ಯಾ ಗೌಡಗೆ ಬೆಂಗಳೂರು ನಗರದ ಇ.ಡಿ. ವಿಶೇಷ ನ್ಯಾಯಾಲಯ (ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್) ಜಾಮೀನು ಮಂಜೂರು ಮಾಡಿದೆ.
ಮಾಟ ಮಂತ್ರ ಪೂಜೆ ನೆಪದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಬಳಿಕ ವಿಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪದ ಮೇರೆಗೆ ಕೇರಳ ರಾಜ್ಯದ ಪ್ರತಿಷ್ಠಿತ ದೇವಾಲಯದ ಅರ್ಚಕನೊಬ್ಬನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಧಾನಿಯಲ್ಲಿ ಮತ್ತೆ ಶಾಲಾ ವಾಹನ ಚಾಲಕರಿಗೆ ಸೋಮವಾರ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿದ್ದು, ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದವರ ವಿರುದ್ಧ 58 ಪ್ರಕರಣ ದಾಖಲಿಸಿದ್ದಾರೆ.
ಹೈಕೋರ್ಟ್ ಆದೇಶದ ನಂತರವೂ ಸೋಮವಾರ ಟ್ಯಾಕ್ಸಿ ಸೇವೆ ನೀಡುತ್ತಿದ್ದ ಬೈಕ್ ಸವಾರರ ವಿರುದ್ಧ ಕ್ರಮ ಕೈಗೊಂಡಿರುವ ಸಾರಿಗೆ ಇಲಾಖೆ, 103 ಬೈಕ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ.
ಪ್ರಯಾಣದ ವೇಳೆ ಕ್ಷುಲ್ಲಕ ಕಾರಣಕ್ಕೆ ರ್ಯಾಪಿಡೋ ಸ್ಕೂಟರ ಸವಾರ ಹಾಗೂ ಮಹಿಳಾ ಗ್ರಾಹಕಿ ಮಧ್ಯೆ ನಡು ರಸ್ತೆಯಲ್ಲಿ ಬೀದಿ ಜಗಳ ನಡೆದು ಪರಸ್ಪರ ಕೈ-ಕೈ ಮಿಲಾಯಿಸಿರುವ ಘಟನೆ ಜಯನಗರದ 3ನೇ ಹಂತದಲ್ಲಿ ನಡೆದಿದೆ.
ಕಂಟೈನರ್ ಹಾಗೂ ಬೈಕ್ ನಡುವಿನ ಅಪಘಾತದಿಂದಾಗಿ ಇಬ್ಬರು ನೃತ್ಯ ಕಲಾವಿದರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.