ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕಳ್ಳರ ಬಂಧನ : ₹2 ಲಕ್ಷ ಮೌಲ್ಯದ 4 ಬೈಕ್ ಜಪ್ತಿಮನೆ ಎದುರು, ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹2.10 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.