ಹಾಡಹಗಲೇ ಬೀಗ ಮುರಿಯುತ್ತಿದ್ದ ಮನೆಗಳ್ಳ ಬಂಧನ: ಚಿನ್ನಾಭರಣ ವಶಇತ್ತೀಚೆಗೆ ಹಾಡಹಗಲೇ ಮನೆಯೊಂದರ ಬೀಗ ಮುರಿದು ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 2.50 ಲಕ್ಷ ರು. ಮೌಲ್ಯದ 42 ಗ್ರಾಂ ಚಿನ್ನಾಭರಣ, 137 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ 2 ಸಾವಿರ ರು. ನಗದು ಜಪ್ತಿ ಮಾಡಲಾಗಿದೆ.