ಏರ್ಪೋರ್ಟ್ನಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ₹23 ಕೋಟಿ ಮೌಲ್ಯದ ಗಾಂಜಾ ಜಪ್ತಿ: 3 ಸೆರೆವಿದೇಶದಿಂದ ಅಕ್ರಮವಾಗಿ ಹೈಡ್ರೋಫೋನಿಕ್ಸ್ ಗಾಂಜಾ ಸಾಗಿಸುತ್ತಿದ್ದ ಮೂವರು ಪ್ರಯಾಣಿಕರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳಿಂದ ಬರೋಬ್ಬರಿ 23 ಕೋಟಿ ರು. ಮೌಲ್ಯದ 23 ಕೆ.ಜಿ. ಗಾಂಜಾ ಜಪ್ತಿ ಮಾಡಿದ್ದಾರೆ.