ನಟ ದರ್ಶನ್ ಹಾಗೂ ಇತರ ಐದು ಆರೋಪಿಗಳಿಗೆ ಹೊಸ ಮತ್ತು ಸೂಕ್ತ ಗುಣಮಟ್ಟದ ಚಾದರ ಹಾಗೂ ಇತರೆ ಬಟ್ಟೆ ಒದಗಿಸಬೇಕು. ಅವನ್ನು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು. ಸುರಕ್ಷಿತ ಬ್ಯಾರಕ್, ಸೆಲ್ಗೆ ಅವರನ್ನು ವರ್ಗಾಯಿಸಿ ಎಂದು 57ನೇ ಸಿಸಿಎಚ್ ಕೋರ್ಟ್ನಿ ರ್ದೇಶಿಸಿದೆ.
ನಗರದ ವಿವಿಧೆಡೆ ಮೊಬೈಲ್ ಕಳವು ಮಾಡುತ್ತಿದ್ದ 42 ಮಂದಿ ಆರೋಪಿಗಳನ್ನು ಬಂಧಿಸಿರುವ ನಗರ ಪೊಲೀಸರು, ಆರೋಪಿಗಳಿಂದ ಸುಮಾರು 3.02 ಕೋಟಿ ರು. ಮೌಲ್ಯದ 1,949 ಮೊಬೈಲ್ಗಳನ್ನು ಜಪ್ತಿ ಮಾಡಿದ್ದಾರೆ
ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರು- ಜಲಸೂರು ರಾಜ್ಯ ಹೆದ್ದಾರಿಯ ತಾಲೂಕಿನ ಹರಿಹರಪುರ ಗ್ರಾಮದ ವ್ಯಾಪ್ತಿಯಲ್ಲಿ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವೈಯಕ್ತಿಕ ಕಾರಣ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ಹತ್ಯೆಗೈದು ಬಳಿಕ ಆಟೋದಲ್ಲಿ ಮೃತದೇಹವನ್ನು ಇಟ್ಟು ದುಷ್ಕರ್ಮಿ ಪರಾರಿಯಾಗಿರುವ ಘಟನೆ ತಿಲಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ರಾಗಿಗುಡ್ಡದ ನಿವಾಸಿ ಸಲ್ಮಾ (35) ಹತ್ಯೆಯಾದ ದುರ್ದೈವಿ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಲ ಮಗಳನ್ನು ಉಸಿರುಗಟ್ಟಿಸಿ ಕೊಂದು ತಂದೆ ಪರಾರಿಯಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮಸಂದ್ರ ಸಮೀಪದ ಕನ್ನಿಕಾ ಬಡಾವಣೆ ನಿವಾಸಿ ಸಿರಿ (7) ಮೃತ ದುರ್ದೈವಿ