ಪತ್ನಿಯ ಕಿರಿಕುಳದಿಂದ ಬೇಸತ್ತು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಟೆಕಿ ಅತುಲ್ ಸುಭಾಷ್ ಅವರ 4 ವರ್ಷದ ಪುತ್ರನ ಕಸ್ಟಡಿಯನ್ನು ಅತುಲ್ ತಾಯಿಗೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅಜ್ಜಿಯು ಮಗುವಿನ ಪಾಲಿಗೆ ಅಪರಿಚಿತರಾಗಿದ್ದಾರೆ ಎಂದು ತಿಳಿಸಿದೆ.
ಈಗಾಗಲೇ ನಗರದಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ವಂಚನೆ ಪ್ರಕರಣಗಳಲ್ಲಿ ಜಾಮೀನು ಪಡೆದಿರುವ ಐಶ್ವರ್ಯ ಗೌಡ ದಂಪತಿ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದ್ದು, ರಾಜರಾಜೇಶ್ವರಿನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚಂದ್ರಾಲೇಔಟ್ ಠಾಣೆಯಲ್ಲಿದಾಖಲಾಗಿರುವ ಐಶ್ವರ್ಯ ಗೌಡ ದಂಪತಿ ವಿರುದ್ಧದ ವಂಚನೆ ಪ್ರಕರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.