ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳಿಗೆ ಮತ್ತೆ ಸಂಕಷ್ಟ ಎದುರಾಗಲಿದ್ದು, ಈ ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ವರ್ತೂರು ಪ್ರಕಾಶ್ ಆಪ್ತೆ ಶ್ವೇತಾಗೌಡ ವಿರುದ್ಧ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.
. ಚಿನ್ನಾಭರಣ ಸಾಲ ಪಡೆದು ವಂಚನೆ ಮಾಡಿದ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿಗಳಾದ ಐಶ್ವರ್ಯಾ ಗೌಡ ಮತ್ತು ಪತಿ ಹರೀಶ್ನನ್ನು ಹೆಚ್ಚಿನ ವಿಚಾರಣೆಗಾಗಿ ಚಂದ್ರಾ ಲೇಔಟ್ ಠಾಣೆ ಪೊಲೀಸರು ಸೋಮವಾರ ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಪ್ರೇಯಸಿ ಸಂಪರ್ಕಕ್ಕೆ ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದ ಭಗ್ನ ಪ್ರೇಮಿ ಕಲ್ಲು ಸಿಡಿಸಲು ಬಳಸುವ ಜಿಲೆಟಿನ್ನಿಂದ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಣಕೆರೆ ಹೋಬಳಿಯ ಕಾಳೇನಹಳ್ಳಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ನಾಲ್ವರು ಯುವಕರ ಗುಂಪು ಅನ್ಯ ಕೋಮಿನ ಯುವಕನ ಮೇಲೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿರುವ ಘಟನೆ ತಾಲೂಕಿನ ಕೊಪ್ಪ ಗ್ರಾಮ ಸಮೀಪದ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆ ಬಳಿ ಗುರುವಾರ ಸಂಜೆ ಜರುಗಿದೆ.