₹25 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿಹೊಸ ವರ್ಷಾಚರಣೆ ದಿನಗಣನೆ ಶುರುವಾದ ಬೆನ್ನಲ್ಲೇ ಡ್ರಗ್ಸ್ ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ ಚುರುಕುಗೊಂಡಿದ್ದು, ನಗರದಲ್ಲಿ ಮತ್ತೆ ವಿದೇಶಿ ಮಹಿಳೆ ಸೇರಿ 12 ಮಂದಿಯನ್ನು ಪ್ರತ್ಯೇಕವಾಗಿ ಬಂಧಿಸಿ ಹೊಸ ವರ್ಷದ ಪಾರ್ಟಿಗಳಿಗೆ ಪೂರೈಸಲು ಸಂಗ್ರಹಿಸಿದ್ದ ₹25 ಕೋಟಿ ಮೌಲ್ಯದ ಮಾದಕ ವಸ್ತು ವನ್ನು ವಶಪಡಿಸಿಕೊಂಡಿದ್ದಾರೆ.