ವಿಳಾಸ ಕೇಳುವ ನೆಪದಲ್ಲಿ ಸ್ತ್ರೀಯರ ಸರ ಕಳವು ಮಾಡುತ್ತಿದ್ದ ನಾಗಪುರ ಗ್ಯಾಂಗ್ ಸೆರೆವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಸರ ಕಳವು ಮಾಡುತ್ತಿದ್ದ ಮಹಾರಾಷ್ಟ್ರದ ಕುಖ್ಯಾತ ‘ನಾಗಪುರ ಗ್ಯಾಂಗ್’ನ ನಾಲ್ವರು ಸದಸ್ಯರನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹6 ಲಕ್ಷ ಮೌಲ್ಯದ 87 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ.