ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ನಟಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ತೀರ್ಪನ್ನು ಹೈಕೋರ್ಟ್ ಶುಕ್ರವಾರ ಪ್ರಕಟಿಸಲಿದೆ.
ಬಿಹಾರ ಮೂಲದ ಟೆಕಿ ಅತುಲ್ ಸುಭಾಷ್ (34) ಆತ್ಮಹತ್ಯೆ ಪ್ರಕರಣ ಸಂಬಂಧ ಮಾರತಹಳ್ಳಿ ಠಾಣೆ ಪೊಲೀಸರು ಉತ್ತರಪ್ರದೇಶ ತಲುಪಿರುವ ವಿಚಾರ ತಿಳಿದ ಕೂಡಲೇ ಬಂಧನ ಭೀತಿಯಲ್ಲಿರುವ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಹಾಗೂ ಆಕೆಯ ಕುಟುಂಬದ ಸದಸ್ಯರು ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾರೆ.
ಹಾಡಹಗಲೇ ಪುಡಿ ರೌಡಿಗಳು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆಆರ್ಎಸ್ನಲ್ಲಿ ಗುರುವಾರ ಸಂಜೆ ನಡೆದಿದೆ. ಮೂಲತಃ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಬಸವರಾಜಪುರ ಗ್ರಾಮದ ರೇವಣ್ಣರ ಪುತ್ರ ಚೇತನ್ (40) ಕೊಲೆಯಾದ ವ್ಯಕ್ತಿ.
ಟೆಕ್ಕಿ ಅತುಲ್ ಸುಬಾಷ್ ಆತ್ಮಹತ್ಯೆ ಪ್ರಕರದ ಬಗ್ಗೆ ಕಂಗನಾ ರಾಣಾವತ್ ಪ್ರತಿಕ್ರಿಯಿಸಿದ್ದು, ‘ಪತ್ನಿಯಿಂದ ಕಿರುಕುಳಕ್ಕೆ ಒಳಗಾದ ಬಗ್ಗೆ ಟೆಕ್ಕಿ ಮಾಡಿರುವ ವಿಡಿಯೋ ಹೃದಯ ವಿದ್ರಾಕವಾಗಿದೆ. ಆತನ ಆರ್ಥಿಕ ಸಾಮರ್ಥ್ಯವನ್ನು ಮೀರಿ ಕೋಟ್ಯಂತರ ಹಣವನ್ನು ವಸೂಲಿ ಮಾಡಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.