ಶಾಸಕ ಮುನಿರತ್ನ ನಮ್ಮ ಮೊಬೈಲ್ ಟ್ಯಾಪ್ ಮಾಡಿಸಿದ್ದಾರೆ. ನಮ್ಮ ಕೊಲೆಗೆ ಯತ್ನಿಸಿದ್ದಲ್ಲದೆ ನನ್ನ-ನನ್ನ ಪತ್ನಿ ಅಶ್ಲೀಲ ವಿಡಿಯೋ ಮಾಡುವುದಾಗಿ ಹೆದರಿಸಿದ್ದ. ಹೀಗಾಗಿ ಮುನಿರತ್ನ ಮೇಲೆ ಕಠಿಣ ಕ್ರಮ ಆಗಬೇಕು ಎಂದು ಕಾಂಗ್ರೆಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಕಾಡಿನಲ್ಲಿ ಕಡವೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ದಕ್ಷಿಣ ಭಾರತದಲ್ಲೂ ಸಂಸತ್ ಅಧಿವೇಶನ ನಡೆಸಬೇಕು ಎಂಬ ಕೂಗು ಕೇಳಿಬಂದಿದೆ. ವೈಎಸ್ಸಾರ್ ಕಾಂಗ್ರೆಸ್ ಸಂಸದ ಮದ್ದಿಲ ಗುರುಮೂರ್ತಿ ಈ ಬೇಡಿಕೆ ಇರಿಸಿದ್ದು, ವರ್ಷಕ್ಕೆ ಕನಿಷ್ಠ 2 ಅಧಿವೇಶನಗಳನ್ನು ದಕ್ಷಿಣದಲ್ಲಿ ನಡೆಸಬೇಕು ಆಗ್ರಹಿಸಿ ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಅವರಿಗೆ ಪತ್ರ ಬರೆದಿದ್ದಾರೆ.
ಜಿಗಣಿ ಪೋಲಿಸರು ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ, ಆತನ ಬಾಂಗ್ಲಾದೇಶದ ಪತ್ನಿ ಸೇರಿದಂತೆ 22 ಮಂದಿ ಬಂಧನ ಸಂಬಂಧ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ 1,350ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ