ಹೊಸ ವರ್ಷಕ್ಕೆ ಸಂಗ್ರಹಿಸಿದ್ದ 3 ಕೋಟಿ ರು. ಡ್ರಗ್ಸ್ ಜಪ್ತಿ : ಪೊಲೀಸರ ಕಾರ್ಯಾಚರಣೆ ಚುರುಕುಹೊಸ ವರ್ಷ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಧಾನಿಯ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರ ಕಾರ್ಯಾಚರಣೆ ಚುರುಕುಗೊಂಡಿದ್ದು, ಮತ್ತೆ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿ ₹3 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಹಾಗೂ ಗೋವಿಂದಪುರ ಠಾಣೆ ಪೊಲೀಸರು ಪ್ರತ್ಯೇಕವಾಗಿ ಜಪ್ತಿ ಮಾಡಿದ್ದಾರೆ.