ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಟೆಕಿಗೆ ₹28 ಲಕ್ಷ ಮೋಸ : ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಬಳಿಕ ಭೇಟಿಯಾಗಲು ವಿದೇಶದಿಂದ ಬಂದಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಕೊಂಚ ಸಮಸ್ಯೆಯಾಗಿದೆ ಎಂದು ಮಹಿಳಾ ಟೆಕಿಯಿಂದ 28.75 ಲಕ್ಷ ರು. ಹಣ ಪಡೆದು ವಂಚಿಸಿದ ಆರೋಪದಡಿ ವೈಟ್ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.