ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ರಾಂಪುರ ಗ್ರಾಮದ ರೈತ ಚಂದ್ರಶೇಖರ್ ಅವರ ಸೇವಿಂಗ್ಸ್ ಖಾತೆಯಲ್ಲಿದ್ದ 1,60,79,890 ರು. ಗಳನ್ನು ಗ್ರಾಹಕರ ಗಮನಕ್ಕೆ ಬಾರದೇ ಯುಪಿಐ ಸಂಪರ್ಕ ಸಾಧಿಸಿ ವಂಚಕರು ಪಂಗನಾಮ ಹಾಕಿದ್ದಾರೆ. ಈ ಪ್ರಕರಣ ಕುರಿತು ಚಂದ್ರಶೇಖರ್ ಮಂಡ್ಯ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.