ಮಾಜಿ ಕಾರ್ಪೋರೆಟರ್ಗಳಿಗೆ ಇ.ಡಿ.ಸಂಕಷ್ಟ?ಕೊಳವೆ ಬಾವಿ ಕೊರೆಸುವ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಹೆಸರಲ್ಲಿ ಕೋಟ್ಯಂತರ ರುಪಾಯಿ ಅವ್ಯವಹಾರ ನಡೆದಿರುವ ಆರೋಪದ ಮೇರೆಗೆ ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದು, ಭ್ರಷ್ಟಾಚಾರ ನಡೆದ ಅವಧಿಯಲ್ಲಿದ್ದ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ವಿಚಾರಣೆ ನಡೆಸುವ ಸಾಧ್ಯತೆ ಇದೆ.