ಬೆಂಗಳೂರಿನ ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪತ್ನಿ ಪ್ರಚೋದನೆ ಮೇಲ್ನೋಟಕ್ಕೆ ಸಾಬೀತುಬೆಂಗಳೂರಿನ ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದ ಸಂಬಂಧ ಆತನ ಪತ್ನಿ ಹಾಗೂ ಇತರರ ವಿರುದ್ಧ ದಾಖಲಿಸಿರುವ ದೂರು ಸಮರ್ಥನೀಯವಾಗಿದ್ದು, ಮೇಲ್ನೋಟಕ್ಕೆ ಆರೋಪಿಗಳು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಂಶಗಳಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.