ಚಿನ್ನಾಭರಣ ಸಾಲ ಪಡೆದು ಕೋಟ್ಯಂತರ ರು. ವಂಚಿಸಿ ಪೊಲೀಸರಿಂದ ವಿಚಾರಣೆ ಎದುರಿಸುತ್ತಿರುವ ಮಂಡ್ಯದ ನವ್ಯಶ್ರೀ ಅಲಿಯಾಸ್ ಐಶ್ವರ್ಯಗೌಡ ವಿರುದ್ಧ ಪೂರ್ವ ಪೊಲೀಸ್ ಠಾಣೆಯಲ್ಲಿ ಮತ್ತೆರಡು ಪ್ರಕರಣ ದಾಖಲಾಗಿದೆ.
ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿ ಚಿನ್ನದ ವ್ಯಾಪಾರಿಗೆ 14 ಕೋಟಿ ರು. ವಂಚಿಸಿದ ಪ್ರಕರಣ ಸಂಬಂಧ ಆರೋಪಿ ಐಶ್ವರ್ಯ ಗೌಡಳ ಮನೆಗಳ ಮೇಲೆ ಬುಧವಾರ ಪೊಲೀಸರು ದಾಳಿ ನಡೆಸಿದ್ದು, ಆರೋಪಿ ಬಳಿ ಕೋಟ್ಯಂತರ ರು. ಮೌಲ್ಯದ ಐಷರಾಮಿ ಕಾರುಗಳು ಪತ್ತೆಯಾಗಿವೆ.
ಸಾಕು ನಾಯಿ ಅನಾರೋಗ್ಯದಿಂದ ಸತ್ತ ನೋವಿನಿಂದ ಅದರದ್ದೇ ಚೈನ್ ಬಳಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹೆಗ್ಗಡದೇವನಪುರದಲ್ಲಿ ನಡೆದಿದೆ.
ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳಿಗೆ ಮತ್ತೆ ಸಂಕಷ್ಟ ಎದುರಾಗಲಿದ್ದು, ಈ ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.