ಐಟಿಪಿಎಲ್ ಬಸ್ ನಿಲ್ದಾಣದಲ್ಲಿ ನಿರ್ವಾಹಕನ ಮೇಲೆ ಹಲ್ಲೆ - ಪ್ರಾಣಾಪಾಯದಿಂದ ಪಾರು : ಆರೋಪಿ ಬಂಧನಐಟಿಪಿಎಲ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ನಿರ್ವಾಹಕನ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಗಾಯಗೊಂಡ ನಿರ್ವಾಹಕ ಯೋಗೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಹರ್ಷ ಸಿನ್ಹಾನನ್ನು ಪೊಲೀಸರು ಬಂಧಿಸಿದ್ದಾರೆ.