ಐಶ್ವರ್ಯಗೌಡ ವಿರುದ್ಧ ಮಂಡ್ಯ ನಗರದ ರವಿಕುಮಾರ್ ಮತ್ತು ಪೂರ್ಣಿಮಾ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಪ್ರಕರಣದ ವಿಚಾರಣೆಗೆ ಬರುವಂತೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ಆ ಹಿನ್ನೆಲೆಯಲ್ಲಿ ಐಶ್ವರ್ಯಗೌಡ ವಿಚಾರಣೆಗೆ ಹಾಜರಾದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿ 7 ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿ 7 ಮಂದಿಗೆ ನೋಟಿಸ್ ಜಾರಿ ಮಾಡಿದೆ.
ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ, ಆಕೆಯ ದೇಹದ ಭಾಗಗಳನ್ನು ಕತ್ತರಿಸಿ, ಕುಕ್ಕರ್ನಲ್ಲಿ ಬೇಯಿಸಿ ಬಳಿಕ ಆಕೆಯ ಶವದ ತುಂಡುಗಳನ್ನು ಕೆರೆಗೆ ಎಸೆದು ನೀಚತನ ಮೆರೆದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಶವದ ತುಂಡುಗಳಿಗೆ ಈಗ ಪೊಲೀಸರು ಶೋಧ ಆರಂಭಿಸಿದ್ದಾರೆ.
ತರಕಾರಿ - ಹಣ್ಣು ತುಂಬಿದ್ದ ಲಾರಿ ಕಂದಕಕ್ಕೆ ಉರುಳಿ ಸಂಭವಿಸಿದ ದುರ್ಘಟನೆಯಲ್ಲಿ 10 ಜನರು ಮೃತಪಟ್ಟು, 19 ಜನರು ಗಾಯಗೊಂಡ ಘಟನೆ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಬೆಳಗಿನ ಜಾವ ನಡೆದಿದೆ.