ಕೊಲೆ, ಹಣಕಾಸು ವಂಚನೆ ಮತ್ತು ಮಾದಕ ದ್ರವ್ಯ ಸಾಗಣೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿಗಳು ಕೆಲವೇ ದಿನಗಳಲ್ಲಿ ಬಂಧಮುಕ್ತರಾಗಲು ‘ಅರೆಸ್ಟ್ ಮೆಮೊ’ (ಬಂಧನ ಕಾರಣ ವಿವರಿಸಿ ನೀಡುವ ಜ್ಞಾಪನಾ ಪತ್ರ) ವರದಾನವಾಗಿ ಪರಿಣಮಿಸಿದೆ.
ಸೈಬರ್ ವಂಚಕರು ಖಾಸಗಿ ಬ್ಯಾಂಕ್ ಪ್ರತಿನಿಧಿಗಳ ಸೋಗಿನಲ್ಲಿ ನಗರದ ಸಾಫ್ಟ್ವೇರ್ ಎಂಜಿನಿಯರೊಬ್ಬರಿಗೆ ಕರೆ ಮಾಡಿ ಹೊಸ ಮೊಬೈಲ್ ಗಿಫ್ಟ್ ಕಳುಹಿಸಿ ಬಳಿಕ ಅವರ ಬ್ಯಾಂಕ್ ಖಾತೆಯಲ್ಲಿದ್ದ ಬರೋಬ್ಬರಿ ₹2.80 ಕೋಟಿ ದೋಚಿದ್ದಾರೆ.
ಚಂದ್ರಶೇಖರ್ ಕೆ.ಆರ್.ಸಾಗರದ ಸಂತೆಗೆ ಬರುತ್ತಿದ್ದ ವೇಳೆ ಎದರುಗಡೆಯಿಂದ ರಭಸವಾಗಿ ಬಂದ ಕಾರು ತನ್ನ ಮುಂದಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕುವ ರಭಸದಲ್ಲಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಮಂಚೇಗೌಡ ರಸ್ತೆ ದಾಟಲು ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ವೇಳೆ ಮದ್ದೂರು ಕಡೆಯಿಂದ ಅತಿವೇಗವಾಗಿ ಬಂದ ಬುಲೆಟ್ ಬೈಕ್ ಡಿಕ್ಕಿಯಾಗಿ ಮಂಚೇಗೌಡ ತೀವ್ರ ಗಾಯಗೊಂಡಿದ್ದಾರೆ. ಜತೆಯಲ್ಲಿದ್ದ ಮಹೇಶ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಹಾಡಹಗಲೇ ಬ್ಯಾಂಕ್ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ 83 ಲಕ್ಷ ರು. ದೋಚಿದ ಆರೋಪಿಗಳ ಪತ್ತೆಗೆ ಮುಗಿ ಬಿದ್ದಿರುವ ಪೊಲೀಸ್ ತಂಡ ತನಿಖೆಯಲ್ಲಿ ಕೊಂಚ ಪ್ರಗತಿ ಸಾಧಿಸಿದೆ
ಮದ್ಯ ಬಿಡಿಸುವ ಸಲುವಾಗಿ ಮದ್ಯವರ್ಜನ ಕೇಂದ್ರದಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬ ದಿಢೀರ್ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.