ಅಪರಾಧ ಪ್ರಕರಣಗಳ ತನಿಖೆಯಲ್ಲಿ ಲೋಪ ಸೇರಿದಂತೆ ಇತರೆ ವಿಷಯಗಳಲ್ಲಿ ಕರ್ತವ್ಯಲೋಪವೆಸಗಿದ ಆರೋಪದ ಮೇರೆಗೆ ರಾಮಮೂರ್ತಿ ನಗರ ಠಾಣೆ ಇನ್ಸ್ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರ ತಲೆದಂಡವಾಗಿದೆ.
ಪ್ರವಾಸಕ್ಕೆ ಹೋಗಿದ್ದಾಗ ಗೆಳತಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬಳಿಕ ಆ ವಿಡಿಯೋ ತೋರಿಸಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡಿ ಬರೋಬ್ಬರಿ ₹2.57 ಕೋಟಿ ಸುಲಿಗೆ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚಿಗೆ ವೀರಭದ್ರನಗರದಲ್ಲಿ ಕರ್ನಾಟಕ ರತ್ನ ತುಮಕೂರಿನ ಶ್ರೀ ಸಿದ್ದಗಂಗಾ ಮಠಾಧ್ಯಕ್ಷರಾಗಿದ್ದ ಡಾ। ಶಿವಕುಮಾರ ಸ್ವಾಮೀಜಿ ಅವರ ಪ್ರತಿಮೆ ವಿರೂಪಗೊಳಿಸಿದ್ದ ಕಿಡಿಗೇಡಿಯೊಬ್ಬನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆಕೆಯ ಪತಿಯನ್ನು ಬಂಧಿಸಿದ್ದಾರೆ.
ಚಿಲ್ಲರೆ ಕಾಸಿಗಾಗಿ ಯುವಕನನ್ನು ಅಪಹರಿಸಿ, ಕೊಲೆ ಮಾಡಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.