ಸಮಾಜದಲ್ಲಿ ಶಾಂತಿ ಕದಡುವ ಹಾಗೂ ರೌಡಿ ಚಟುವಟಿಕೆಗಳಲ್ಲಿ ಭಾಗವಹಿಸದೇ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ರೌಡಿಶೀಟರ್ ಪಟ್ಟಿಯಲ್ಲಿ ಇರುವವರು ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಗಡಿಪಾರು ಮಾಡಲು ಶಿಫಾರಸ್ಸು ಮಾಡಲಾಗುವುದು.
ಮಳವಳ್ಳಿ : ಪಟ್ಟಣದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಸೋಮವಾರ ಹಲಗೂರು ವೃತ್ತ ವ್ಯಾಪ್ತಿಯ 50ಕ್ಕೂ ಹೆಚ್ಚು ರೌಡಿಶೀಟರ್ ಗಳ ಪರೇಡ್ ನಡೆಸಲಾಯಿತು.
ಈ ವೇಳೆ ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಮಾತನಾಡಿ, ಯಾವುದೇ ಸಂದರ್ಭಗಳಲ್ಲೂ ನಿಮ್ಮ ಚಟುವಟಿಕೆಗಳನ್ನು ಮುಂದುವರೆಸಬಾರದು. ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗಬಾರದು. ನಿಮ್ಮ ವರ್ತನೆಯಿಂದ ಕುಟುಂಬಸ್ಥರ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು.
ಸಮಾಜದಲ್ಲಿ ಶಾಂತಿ ಕದಡುವ ಹಾಗೂ ರೌಡಿ ಚಟುವಟಿಕೆಗಳಲ್ಲಿ ಭಾಗವಹಿಸದೇ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ರೌಡಿಶೀಟರ್ ಪಟ್ಟಿಯಲ್ಲಿ ಇರುವವರು ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಗಡಿಪಾರು ಮಾಡಲು ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಿಮ್ಮ ಚಟುವಟಿಕೆಗಳ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸುತ್ತದೆ. ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿಳಾಸ ಬದಲಾವಣೆ ಹಾಗೂ ನಿಮ್ಮ ಮೇಲಿರುವ ಪ್ರಕರಣಗಳ ಬಗ್ಗೆ ನಿರಂತರವಾಗಿ ಮಾಹಿತಿ ಕಲೆ ಹಾಕಲಾಗುತ್ತದೆ. ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಗಡಿಪಾರು ಮಾಡಲು ಮಾಡಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದರು.
ಹಲಗೂರು ಠಾಣೆ ಪಿಎಸ್ಐ ಲೋಕೇಶ್, ಬೆಳಕವಾಡಿ ಪಿಎಸ್ಐ ಬಿ.ವಿ.ಪ್ರಕಾಶ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: 17 ಮಂದಿ ವಿರುದ್ಧ ಪ್ರಕರಣ ದಾಖಲು
ಹಲಗೂರು: ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿಯಲ್ಲಿ ಮಂಗಳವಾರ ತಡರಾತ್ರಿ ಪೊಲೀಸರು ಜೂಜಾಡುತ್ತಿದ್ದವರ ಮೇಲೆ ದಾಳಿ ಮಾಡಿ ಪಣಕಿಟ್ಟಿದ್ದ 6,88,000 ರು. ವಶ ಪಡಿಸಿಕೊಂಡು 17 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮದ 17 ಜನರು ಮಂಗಳವಾರ ಬೆಳಗ್ಗೆ ಮುತ್ತತ್ತಿಗೆ ಬಂದು ದೇವರ ದರ್ಶನ ಮಾಡಿ ನಂತರ ಪಾರ್ಟಿ ಹಾಲ್ ಒಂದರಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ಹಲಗೂರು ಸಬ್ ಇನ್ಸ್ ಪೆಕ್ಟರ್ ಲೋಕೇಶ್ ಪ್ರೊಪೋಸನರಿ ಜಯಂತ್, ಸುನಿಲ್ ಮತ್ತು ಗುಪ್ತ ಮಾಹಿತಿದಾರ ಮೋಹನ ಮತ್ತು ಮಹೇಂದ್ರ, ಗೋವರ್ಧನ್ ಸೇರಿದಂತೆ ಇತರೆ ಸಿಬ್ಬಂದಿ ದಾಳಿ ನಡೆಸಿ 17 ಜನರನ್ನು ಬಸ್ಸಿನಲ್ಲಿ ಕರೆ ತರುವಾಗ ಆರು ಜನರು ಕತ್ತಲಿನಲ್ಲಿ ಪೊಲೀಸರನ್ನು ತಳ್ಳಿ ತಪ್ಪಿಸಿಕೊಂಡು ಪರಿಯಾಗಿದ್ದಾರೆ.
ಒಟ್ಟು 17 ಜನರ ಮೇಲೆ ಪ್ರಕರಣ ದಾಖಸಿಕೊಂಡು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಮುತ್ತತ್ತಿ ಪ್ರವಾಸಿ ತಾಣದಲ್ಲಿ ಮದ್ಯಪಾನ, ಅಕ್ರಮ ಚಟುವಟಿಕೆ ತಡೆಯುವುದು ಹಾಗೂ ಕಾವೇರಿ ನದಿಯಲ್ಲಿ ಈಜುವುದನ್ನು ನಿಷೇಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರವಾಸಿಗರ ಮೇಲೆ ಹೆಚ್ಚಿನ ನಿಗಾ ವಹಿಸಿದ್ದಾರೆ.
ಬಸ್ಸಿನಲ್ಲಿ ಗೃಹಿಣಿ ವ್ಯಾನಿಟಿ ಬ್ಯಾಗ್ ನಲ್ಲಿ 16 ಗ್ರಾಂ ಚಿನ್ನ ಕಳತನ
ಹಲಗೂರು: ಸಾರಿಗೆ ಬಸ್ಸಿನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 16 ಗ್ರಾಂ ಚಿನ್ನ ಹಾಗೂ ನಗದನ್ನು ಕಳ್ಳರು ಕಳವು ಮಾಡಿರುವ ಘಟನೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೆಂಗಳೂರಿನ ಸೋಮಣ್ಣರ ಪತ್ನಿ ನಿಶ್ಚಿತ ತಮ್ಮ ತವರೂರು ಡಿ.ಹಲಸಳ್ಳಿಗೆ ಬಂದು ನಂತರ ಸ್ವಗ್ರಾಮ ಬೆಂಗಳೂರಿಗೆ ಹೋಗಲು ಹಲಗೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಇಳಿದಾಗ ತಾವು ವ್ಯಾನಿಟಿ ಬ್ಯಾಗ್ ನೋಡಿದ್ದು, ಅದರ ಜಿಪ್ ತೆಗೆದು 6 ಗ್ರಾಂ ಒಂದು ಜೊತೆ ಓಲೆ, ಆರು ಗ್ರಾಮ್ ಮಾಟಿ, ನಾಲ್ಕು ಗ್ರಾಂ ಗುಂಡು ಸೇರಿದಂತೆ 2,000 ರೂ ನಗದು ಸೇರಿದಂತೆ ಒಟ್ಟು 1,94,000 ಚಿನ್ನವನ್ನು ಬಸ್ಸಿನಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಹಲಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಈ ಸಂಬಂಧ ಎಎಸ್ ಐ ರಮೇಶ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
