ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ್ದು, ಇದನ್ನು ನೋಡಲು ಬರುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಸವಾರ ಬಲಿ

| Published : Aug 05 2024, 12:38 AM IST / Updated: Aug 05 2024, 05:08 AM IST

ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ್ದು, ಇದನ್ನು ನೋಡಲು ಬರುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಸವಾರ ಬಲಿ
Share this Article
  • FB
  • TW
  • Linkdin
  • Email

ಸಾರಾಂಶ

ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ್ದು, ಇದನ್ನು ನೋಡಲು ಬರುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ಕಳೆದ ರಾತ್ರಿ ನಡೆದಿದೆ.

 ಮಳವಳ್ಳಿ :  ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ್ದು, ಇದನ್ನು ನೋಡಲು ಬರುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ಕಳೆದ ರಾತ್ರಿ ನಡೆದಿದೆ.

ತಾಲೂಕಿನ ದೇವಿಪುರ ಗ್ರಾಮದ ಬಸವೇಗೌಡ (65) ಹಾಗೂ ಮದ್ದೂರು ತಾಲೂಕಿನ ದೇವರಹಳ್ಳಿಯ ಬೈಕ್‌ ಸವಾರ ನಾಗರಾಜು(28) ಮೃತಪಟ್ಟವರು.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಸವೇಗೌಡರಿಗೆ ತಳಗವಾದಿ ಗ್ರಾಮದಿಂದ ಮಳವಳ್ಳಿಗೆ ಹೋಗುತ್ತಿದ್ದ ವಿಜಯ್ ಬೈಕ್‌ನಲ್ಲಿ ಡಿಕ್ಕಿ ಹೊಡೆದ ಪರಿಣಾಮ ಬಸವೇಗೌಡ ಸಾವನ್ನಪ್ಪಿದ್ದಾರೆ. ಅಪಘಾತವನ್ನು ನೋಡಲು ಬರುತ್ತಿದ್ದ ಚೌಡೇಗೌಡ ಎಂಬ ವ್ಯಕ್ತಿಗೆ ಕೆ.ಎಂ.ದೊಡ್ಡಿ ಕಡೆಯಿಂದ ಮಳವಳ್ಳಿಗೆ ಬರುತ್ತಿದ್ದ ಬೈಕ್ ಸವಾರ ನಾಗರಾಜು ಡಿಕ್ಕಿ ಹೊಡೆದಿದ್ದಾನೆ. ಬೈಕ್‌ನಿಂದ ಬಿದ್ದ ನಾಗರಾಜು ಸಾವನ್ನಪ್ಪಿದ್ದಾರೆ.

ಗಾಯಗೊಂಡ ವಿಜಯ್ ಹಾಗೂ ಚೌಡೇಗೌಡರನ್ನು ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಮೃತ ದೇಹವನ್ನು ತಾಲೂಕು ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಎರಡು ಕಣ್ಣುಗಳು ದಾನ; ಅಂಧರ ಬಾಳಿಗೆ ಬೆಳಕು

ಶ್ರೀರಂಗಪಟ್ಟಣ:ತಾಲೂಕಿನ ಪಾಲಹಳ್ಳಿಯ ಶಿವರಾಜು ತಮ್ಮ ಸಾವಿನ ನಂತರ ಎರಡು ಕಣ್ಣುಗಳನ್ನು ದಾನ ಮಾಡುವ ಮೂಲಕ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಗ್ರಾಮದ ಬಸವನಗುಡಿ ಬೀದಿ ನಿವಾಸಿ ಚೆನ್ನಕೃಷ್ಣಪ್ಪ ಪುತ್ರ ಶಿವರಾಜು (81) ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ. ವಯೋಸಹಜ ನಿಮಿತ್ತ ಮರಣ ಹೊಂದಿದ ಹಿನ್ನೆಲೆಯಲ್ಲಿ ಮೃತ ಶಿವರಾಜು ಅವರ ಇಷ್ಟದಂತೆ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಮೈಸೂರು ಜಿಲ್ಲಾ ಆಸ್ಪತ್ರೆ ವೈದ್ಯರ ತಂಡ ಕಣ್ಣುಗಳನ್ನು ಪಡೆದುಕೊಂಡಿದ್ದಾರೆ.