ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಇರಾಕೋಡಿಯಲ್ಲಿ ಮಂಗಳವಾರ ನಡೆದ ಪಿಕಪ್‌ ಚಾಲಕ ಅಬ್ದುಲ್‌ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

 ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಇರಾಕೋಡಿಯಲ್ಲಿ ಮಂಗಳವಾರ ನಡೆದ ಪಿಕಪ್‌ ಚಾಲಕ ಅಬ್ದುಲ್‌ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕೂರಿಯಾಳ ಮುಂಡರಕೋಡಿ ನಿವಾಸಿ ದೀಪಕ್ (21)‌, ಅಮ್ಮುಂಜೆ ಶಿವಾಜಿ ನಗರ ನಿವಾಸಿಗಳಾದ ಪೃಥ್ವಿರಾಜ್‌(21) ಹಾಗೂ ಚಿಂತನ್ (19)‌ ಎಂದು ಗುರುತಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ ಬಂಟ್ವಾಳ ಪೊಲೀಸ್‌ ಉಪಾಧೀಕ್ಷಕರ ನೇತೃತ್ವದಲ್ಲಿ ಐದು ತನಿಖಾ ತಂಡಗಳನ್ನು ರಚಿಸಲಾಗಿತ್ತು.

 ಗುರುವಾರ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟು 15 ಮಂದಿ ಮೇಲೆ ಎಫ್‌ಐಆರ್‌ ದಾಖಲಾಗಿದೆ.