ಕೂಡ್ಲಿಗಿ ತಾಲೂಕು ಹರವದಿ ಗ್ರಾಮದ ಜಮೀನಿನಲ್ಲಿ ಎತ್ತೊಂದು ಮೇಯುತ್ತಿದ್ದಾಗ ಕಾಡುಪ್ರಾಣಿಗಳನ್ನು ಬೇಟೆಯಾಡಲು ಬಳಸುವ ಸ್ಪೋಟಕವನ್ನುಆಕಸ್ಮಿಕವಾಗಿ ತಿಂದಿದ್ದರಿಂದ ಸ್ಪೋಟಿಸಿ ಎತ್ತಿನ ಬಾಯಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆಕೈಗೊಂಡಿದ್ದಾರ | Kannada Prabha
Image Credit: KP
ಹಿರೇಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರ 8ನೇ ತರಗತಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಕನ್ನಡಪ್ರಭ ವಾರ್ತೆ ಹೂವಿನಹಡಗಲಿ ಹಿರೇಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರ 8ನೇ ತರಗತಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೋಟಿಸ್ ಜಾರಿ ಮಾಡಿದೆ. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪದಡಿಯಲ್ಲಿ ಹಿರೇಹಡಗಲಿ ಕೆಪಿಟಿಸಿಎಲ್ ಸ್ಟೇಷನ್ ಮೆಕ್ಯಾನಿಕ್ ಕರ್ತವ್ಯದಲ್ಲಿರುವ ಕೊಟ್ರೇಶ ಬಾರ್ಕಿ ಎಂಬಾತನನ್ನು ಪೋಕ್ಸೊ ಕಾಯ್ದೆಯಡಿ ಇತ್ತೀಚೆಗೆ ಬಂಧಿಸಲಾಗಿದೆ. ಈ ಪ್ರಕರಣ ದಾಖಲಾದ ನಂತರ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಖಾಸಗಿ ಶಾಲೆಯಲ್ಲಿ ಆರ್‌ಟಿಇ ನಿಯಮ ಹಾಗೂ ವಿದ್ಯಾರ್ಥಿನಿಯರ ಸುರಕ್ಷತಾ ಮಾರ್ಗಸೂಚಿಗಳನ್ನು ಸ್ಪಷ್ಟ ಉಲ್ಲಂಘನೆಯಾಗಿದೆ. ಅನಧಿಕೃತ ವ್ಯಕ್ತಿಯನ್ನು ಶಾಲೆಯೊಳಗೆ ಬಿಟ್ಟುಕೊಂಡಿರುವುದು ತಪ್ಪು. ಈ ಕುರಿತು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಪೂಜಾರ್ ತಿಳಿಸಿದರು. ಈ ವರೆಗೂ ಅನುಮತಿ ಪಡೆಯದೆ ತೆರೆದಿರುವ ವಸತಿನಿಲಯ ಮುಚ್ಚುವಂತೆ ಸೂಚಿಸಲಾಗಿದೆ. ನೋಟಿಸ್ ನೀಡಿರುವ ಕಾಲಮಿತಿಯೊಳಗೆ ಸಂಬಂಧಪಟ್ಟ ಖಾಸಗಿ ಶಾಲೆಯವರು ನೋಟಿಸ್ ಗೆ ಉತ್ತರಿಸಬೇಕು. ಇಲ್ಲದಿದ್ದರೆ ಆಯಾ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ ಜರುಗಿಸಲು ಇಲಾಖೆಗೆ ಶಿಫಾರಸು ಮಾಡುತ್ತದೆ ಎಂದರು.
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.