ಸಾರಾಂಶ
ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಅವರು ಚುನಾವಣೆ ಪ್ರಚಾರ ನಡೆಸುವಲ್ಲಿ ಭದ್ರತೆಗೆಂದು ನಿಯೋಜನೆಗೊಂಡಿದ್ದ ಪೊಲೀಸರು ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ
ಜೈಪುರ: ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಅವರು ಚುನಾವಣೆ ಪ್ರಚಾರ ನಡೆಸುವಲ್ಲಿ ಭದ್ರತೆಗೆಂದು ನಿಯೋಜನೆಗೊಂಡಿದ್ದ ಪೊಲೀಸರು ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಘಟನೆ ಭಾನುವಾರ ಮುಂಜಾನೆ 5:30ರ ವೇಳೆಗೆ ಚುರು ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಸೈಲೋ ಎಸ್‌ಯುವಿ ಕಾರಿನಲ್ಲಿ ತಾರಾನಗರಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯದಲ್ಲಿ ಟ್ರಕ್‌ಗೆ ಡಿಕ್ಕಿಯಾದ ಪರಿಣಾಮ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿ ಕಾರಿನಲ್ಲೇ ಐವರು ಸಾವನ್ನಪ್ಪಿ ಮತ್ತಿಬ್ಬರು ಗಂಭೀರಗೊಂಡಿದ್ದರು. ತಕ್ಷಣ ಅವರನ್ನು ಜೋಧಪುರ ಆಸ್ಪತ್ರೆಗೆ ಕರೆದೊಯ್ದರು ಮತ್ತೊಬ್ಬರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.