ಭೂ ವಿಜ್ಞಾನಿ ಪ್ರತಿಮಾ ಕೊಲೆ ಕೇಸ್‌ ತನಿಖೆ ಪೂರ್ಣ: ಶೀಘ್ರ ಚಾರ್ಜ್‌ಶೀಟ್‌

| Published : Jan 12 2024, 01:45 AM IST

ಭೂ ವಿಜ್ಞಾನಿ ಪ್ರತಿಮಾ ಕೊಲೆ ಕೇಸ್‌ ತನಿಖೆ ಪೂರ್ಣ: ಶೀಘ್ರ ಚಾರ್ಜ್‌ಶೀಟ್‌
Share this Article
  • FB
  • TW
  • Linkdin
  • Email

ಸಾರಾಂಶ

ಎರಡು ತಿಂಗಳ ಹಿಂದೆ ನಡೆದಿದ್ದ ಬೆಂಗಳೂರು ನಗರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ ಸಂಬಂಧ ಪೊಲೀಸರ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಆರೋಪಪಟ್ಟಿಯನ್ನು ಸಲ್ಲಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಎರಡು ತಿಂಗಳ ಹಿಂದೆ ನಡೆದಿದ್ದ ಬೆಂಗಳೂರು ನಗರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ ಸಂಬಂಧ ದಕ್ಷಿಣ ವಿಭಾಗದ ಪೊಲೀಸರ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಆರೋಪಪಟ್ಟಿಯನ್ನು ಸಲ್ಲಿಸಲಿದ್ದಾರೆ.

ದೊಡ್ಡಕಲ್ಲಸಂದ್ರದ ತಮ್ಮ ಮನೆಯಲ್ಲಿ ನ.6 ರಂದು ರಾತ್ರಿ ಭೂ ವಿಜ್ಞಾನಿ ಪ್ರತಿಮಾ ಕೊಲೆಗೀಡಾಗಿದ್ದರು. ಈ ಕೃತ್ಯದಲ್ಲಿ ಅವರ ಮಾಜಿ ಕಾರು ಚಾಲಕ ಕಿರಣ್ ಬಂಧನವಾಗಿತ್ತು. ಮೊದಲು ತನ್ನನ್ನು ಕೆಲಸದಿಂದ ವಜಾಗೊಳಿಸಿದ್ದ ಸಿಟ್ಟಿಗೆ ಪ್ರತಿಮಾ ಅವರನ್ನು ಕಿರಣ್ ಹತ್ಯೆ ಮಾಡಿದ್ದ ಎನ್ನಲಾಗಿತ್ತು. ಬಳಿಕ ಪೊಲೀಸರು ತನಿಖೆ ಮುಂದುವರೆಸಿದಾಗ ಪ್ರತಿಮಾ ಅವರನ್ನು ಹತ್ಯೆಗೈದ ಬಳಿಕ ₹5 ಲಕ್ಷ ನಗದು ಹಾಗೂ ಚಿನ್ನಾಭರಣವನ್ನು ಆರೋಪಿ ದೋಚಿದ್ದ ಸಂಗತಿ ಬಯಲಾಗಿತ್ತು. ಹೀಗಾಗಿ ಹಣಕ್ಕಾಗಿಯೇ ಪ್ರತಿಮಾ ಅವರನ್ನು ಕಿರಣ್ ಕೊಲೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದರು.

ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಎರಡು ತಿಂಗಳ ತನಿಖೆಗೆ ನಡೆಸಿದ ಪೊಲೀಸರು, ಕೃತ್ಯ ಸಂಬಂಧ ಮೃತ ಪ್ರತಿಮಾ ಕುಟುಂಬದವರು, ಸಹೋದ್ಯೋಗಿಗಳು ಹಾಗೂ ನೆರೆಹೊರೆಯವರನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ. ಅಲ್ಲದೆ ಆರೋಪಿ ಕಿರಣ್ ಕುರಿತು ಸಹ ಸಾಕಷ್ಟು ಪುರಾವೆ ಕಲೆ ಹಾಕಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. -ಕೋಟ್‌-

ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ. ಶೀಘ್ರವೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸುತ್ತೇವೆ.

-ರಾಹುಲ್ ಕುಮಾರ್ ಶಹಾಪುರವಾಡ್‌, ಡಿಸಿಪಿ, ದಕ್ಷಿಣ ವಿಭಾಗ.