ಸಾರಾಂಶ
ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಕಾರಣ ಪೋಸ್ಟ್ ವುಮನ್ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸೂರ್ಯ ನಗರ ಠಾಣಾ ವ್ಯಾಪ್ತಿಯ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಕಿತ್ತಗಾನಹಳ್ಳಿ ಗೇಟ್ ಬಳಿ ನಡೆದಿದೆ.
ಕನ್ನಡಪ್ರಭ ವಾರ್ತೆ ಆನೇಕಲ್ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಕಾರಣ ಪೋಸ್ಟ್ ವುಮನ್ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸೂರ್ಯ ನಗರ ಠಾಣಾ ವ್ಯಾಪ್ತಿಯ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಕಿತ್ತಗಾನಹಳ್ಳಿ ಗೇಟ್ ಬಳಿ ನಡೆದಿದೆ.
ಪ್ರಿಯಾ(45) ಅಪಘಾತದಲ್ಲಿ ಮೃತ ಪಟ್ಟ ಅಂಚೆ ಮಹಿಳೆ. ತನ್ನ ಬೈಕ್ ನಲ್ಲಿ ಪೋಸ್ಟ್ ಗಳನ್ನು ಮನೆ ಮನೆಗೆ ತಲುಪಿಸಲು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ರಭಸಕ್ಕೆ ಆಕೆ ಕೆಳಗೆ ಬಿದ್ದು ಅದೇ ಟಿಪ್ಪರ್ ಲಾರಿ ಚಕ್ರ ಆಕೆಯ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಲಾರಿ ಚಾಲಕ ಭೀಮಪ್ಪನನ್ನು ಬಂಧಿಸಲಾಗಿದೆ.ಪ್ರಿಯಾಳ ಪತಿ ಸುರೇಶ ಇಲೆಕ್ಟ್ರಾನಿಕ್ ಸಿಟಿ ಇನ್ಫೋಸಿಸ್ ಉದ್ಯೋಗಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿದ ಇನ್ಸ್‌ಪೆಕ್ಟರ್ ಪ್ರಕರಣ ದಾಖಲಿಸಿಕೊಂಡು ಕ್ರಮ ವಹಿಸಿದ್ದಾರೆ. ತುಮಕೂರಿನ ಮಾಲೀಕರೊಬ್ಬರು ಈ ಟಿಪ್ಪರ್ ಲಾರಿ ಖರೀದಿಸಿದ್ದು ವಾಹನ ಡೆಲಿವರಿ ಕೊಡುವ ಮುನ್ನ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
)
)
;Resize=(128,128))
;Resize=(128,128))
;Resize=(128,128))
;Resize=(128,128))