10 ವರ್ಷಗಳಿಂದ ಕೋರ್ಟ್‌ ವಿಚಾರಣೆಗೆ ಬರದವನ ಸೆರೆ

| Published : Jun 01 2024, 01:46 AM IST / Updated: Jun 01 2024, 04:38 AM IST

arrest 4.jpg

ಸಾರಾಂಶ

ಹಲ್ಲೆ ಪ್ರಕರಣದಲ್ಲಿ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡ ಆರೋಪಿಯನ್ನು ಬಂಧಿಸಿರುವುದು.

 ಬೆಂಗಳೂರು : ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬನಶಂಕರಿ 2ನೇ ಹಂತದ ಭವಾನಿ ನಗರ ನಿವಾಸಿ ಬಿ.ಆರ್‌.ನಟರಾಜ್‌(51) ಬಂಧಿತ. ಆರೋಪಿಯ ವಿರುದ್ಧ 2014ರಲ್ಲಿ ಹಲ್ಲೆ ಪ್ರಕರಣ ದಾಖಲಾಗಿದ್ದು, ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನು ಪಡೆದು ಹೊರಗೆ ಬಂದಿದ್ದ ಆರೋಪಿ ನಟರಾಜ್‌, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯ ಬಂಧನಕ್ಕೆ ನ್ಯಾಯಾಲಯವು ಹಲವು ಬಾರಿ ವಾರೆಂಟ್ ಜಾರಿ ಮಾಡಿತ್ತು.

ಇದರ ಬೆನ್ನಲ್ಲೇ ಆರೋಪಿಯ ಬಂಧನಕ್ಕೆ ರಚಿಸಲಾಗಿದ್ದ ಪೊಲೀಸರ ವಿಶೇಷ ತಂಡವು, ಆರೋಪಿಯು ಇತ್ತೀಚೆಗೆ ಚನ್ನಮ್ಮನಕೆರೆ ಅಚ್ಚುಕಟ್ಟು ಗೌಡರಪಾಳ್ಯದ ದುರ್ಗಾಂಭ ದೇವಾಲಯದ ಬಳಿ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 ವರ್ಷಗಳಿಂದ ಕೋರ್ಟ್‌ ವಿಚಾರಣೆಗೆ ಬರದವನ ಸೆರೆ

 ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬನಶಂಕರಿ 2ನೇ ಹಂತದ ಭವಾನಿ ನಗರ ನಿವಾಸಿ ಬಿ.ಆರ್‌.ನಟರಾಜ್‌(51) ಬಂಧಿತ. ಆರೋಪಿಯ ವಿರುದ್ಧ 2014ರಲ್ಲಿ ಹಲ್ಲೆ ಪ್ರಕರಣ ದಾಖಲಾಗಿದ್ದು, ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನು ಪಡೆದು ಹೊರಗೆ ಬಂದಿದ್ದ ಆರೋಪಿ ನಟರಾಜ್‌, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯ ಬಂಧನಕ್ಕೆ ನ್ಯಾಯಾಲಯವು ಹಲವು ಬಾರಿ ವಾರೆಂಟ್ ಜಾರಿ ಮಾಡಿತ್ತು.ಇದರ ಬೆನ್ನಲ್ಲೇ ಆರೋಪಿಯ ಬಂಧನಕ್ಕೆ ರಚಿಸಲಾಗಿದ್ದ ಪೊಲೀಸರ ವಿಶೇಷ ತಂಡವು, ಆರೋಪಿಯು ಇತ್ತೀಚೆಗೆ ಚನ್ನಮ್ಮನಕೆರೆ ಅಚ್ಚುಕಟ್ಟು ಗೌಡರಪಾಳ್ಯದ ದುರ್ಗಾಂಭ ದೇವಾಲಯದ ಬಳಿ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 8 ವರ್ಷಗಳಿಂದ ನಾಪತ್ತೆ ಆಗಿದ್ದ ಪೋಕ್ಸೋ ಆರೋಪಿ ಬಂಧನ

 ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ವಿಳ್ಳುಪುರಂ ಜಿಲ್ಲೆಯ ಹೇಮಾಪುರ ನಿವಾಸಿ ಶಕ್ತಿವೇಲು(40) ಬಂಧಿತ. ಆರೋಪಿಯ 2016ರಲ್ಲಿ ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರಕುಳ ನೀಡಿದ್ದ. ಈ ಸಂಬಂಧ ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಪ್ರಕರಣವನ್ನು ನ್ಯಾಯಾಲಯವು ಲಾಂಗ್‌ ಪೆಂಡಿಂಗ್‌ ರಿಪೋರ್ಟ್‌(ಎಲ್‌ಪಿಆರ್‌) ಎಂದು ಆದೇಶಿಸಿತ್ತು.ಇದರ ಬೆನ್ನಲ್ಲೇ ಆರೋಪಿಯ ಬಂಧನಕ್ಕೆ ರಚಿಸಲಾಗಿದ್ದ ಪೊಲೀಸರ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸದ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.