ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ; ಮಹಿಳೆಯರಿಬ್ಬರ ರಕ್ಷಣೆ

| Published : Jun 01 2024, 01:46 AM IST / Updated: Jun 01 2024, 04:36 AM IST

bar dance 5
ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ; ಮಹಿಳೆಯರಿಬ್ಬರ ರಕ್ಷಣೆ
Share this Article
  • FB
  • TW
  • Linkdin
  • Email

ಸಾರಾಂಶ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ ನಡೆಸಿ ಪೊಲೀಸರು ಮಹಿಳೆಯರನ್ನು ರಕ್ಷಿಸಿದ್ದಾರೆ.

 ಬೆಂಗಳೂರು :  ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ ಮಾಡಿರುವ ಇಂದಿರಾನಗರ ಠಾಣೆ ಪೊಲೀಸರು, ಸ್ಪಾ ಮ್ಯಾನೇಜರ್‌ನನ್ನು ಬಂಧಿಸಿ ಹೊರರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಸ್ಪಾ ಮ್ಯಾನೇಜರ್ ಮಣಿ ಬಂಧಿತ. ಸ್ಪಾ ಮಾಲೀಕ ಉಪ್ಪೇನ್ ರಾಟಿ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಶೋಧ ಕಾರ್ಯ ಮುಂದುವರೆದಿದೆ. ದೊಮ್ಮಲೂರು 2ನೇ ಹಂತದ ಸ್ಪಾವೊಂದರಲ್ಲಿ ಹೊರರಾಜ್ಯದ ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮೇ 29ರಂದು ಪೊಲೀಸರು ಸ್ಪಾ ಮೇಲೆ ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಉತ್ತರ ಪ್ರದೇಶ ಮತ್ತು ನಾಗಲ್ಯಾಂಡ್‌ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.

ಸ್ಪಾ ನಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಂಡಿಂಗ್ ಇತ್ಯಾದಿ ಸೇವೆಗಳ ಹೆಸರಿನಲ್ಲಿ ಗ್ರಾಹಕರನ್ನು ಬರಮಾಡಿಕೊಂಡು ಬಳಿಕ ಲೈಂಗಿಕ ಕ್ರಿಯೆಗೆ ಪುಸಲಾಯಿಸಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಾಗಿ ಸ್ಪಾ ಮ್ಯಾನೇಜರ್‌ ಮಣಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಸದ್ಯಕ್ಕೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಇಂದಿರಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.