ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿಗೆ 25 ವರ್ಷ ಕಠಿಣ ಜೈಲು ಶಿಕ್ಷೆ

| Published : Oct 14 2023, 01:01 AM IST

ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿಗೆ 25 ವರ್ಷ ಕಠಿಣ ಜೈಲು ಶಿಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿಗೆ 25 ವರ್ಷ ಕಠಿಣ ಜೈಲು ಶಿಕ್ಷೆ
ಕನ್ನಡಪ್ರಭ ವಾರ್ತೆ ಮೈಸೂರು ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯವು 25 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹಾರೋಪುರ ಗ್ರಾಮದ ಪ್ರದೀಪ್ ಕುಮಾರ್ ಶಿಕ್ಷೆಗೆ ಗುರಿಯಾದವ. ಈತನು ಬಾಲಕಿಗೆ ದೂರದ ಸಂಬಂಧಿಯಾಗಿದ್ದು, ಆಗಾಗ್ಗೆ ಬಾಲಕಿ ಮನೆಗೆ ಬರುತ್ತಿದ್ದ. 2021ರ ಫೆ.17 ರಂದು ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಬಲವಂತವಾಗಿ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಪ್ರದೀಪ್, ಮನೆಯವರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದೇ ರೀತಿ ಹಲವಾರು ಬಾರಿ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದ್ದ ಪರಿಣಾಮ ಬಾಲಕಿಯು 7 ತಿಂಗಳ ಗರ್ಣಿಣಿಯಾಗಿರುವುದು ದೃಢಪಟ್ಟಿತ್ತು. ಈ ಸಂಬಂಧ ನಂಜನಗೂಡು ಆಗಿನ ಸಿಪಿಐ ಲಕ್ಷ್ಮೀಕಾಂತ್ ತಳವಾರ್ ಅವರು ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶೈಮ ಖರ್ಮೋಜ್ ಅವರು, ಆರೋಪಿ ಪ್ರದೀಪ್ ಕುಮಾರ್ ಮೇಲಿನ ಆರೋಪ ಸಾಬೀತಾಗಿದೆ ಎಂದು ಪೋಕ್ಸೋ ಕಾಯ್ದೆಯಂತೆ 25 ವರ್ಷಗಳ ಕಠಿಣ ಸಜೆ, 1.01 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಹಣದಲ್ಲಿ 75 ಸಾವಿರ ರೂ. ಪರಿಹಾರದ ರೂಪದಲ್ಲಿ ಬಾಲಕಿಗೆ ನೀಡಬೇಕು ಹಾಗೂ ನೊಂದ ಬಾಲಕಿ 5 ಲಕ್ಷ ರೂ. ಪರಿಹಾರಕ್ಕೆ ಅರ್ಹಳು ಎಂದು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ. ಜಯಂತಿ ವಾದಿಸಿದ್ದರು.