ಹಾಸ್ಟಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

| Published : May 30 2024, 12:53 AM IST / Updated: May 30 2024, 04:52 AM IST

ಹಾಸ್ಟಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ
Share this Article
  • FB
  • TW
  • Linkdin
  • Email

ಸಾರಾಂಶ

ಕೆ.ಆರ್.ಪೇಟೆ ಪಟ್ಟಣದ ವಸತಿ ನಿಲಯದಲ್ಲಿ ವಾಸವಿದ್ದ ವಿದ್ಯಾರ್ಥಿನಿಗೆ ಸ್ನೇಹಿತನನ್ನು ವಿಚಾರಿಸುವ ನೆಪದಲ್ಲಿ ಕರೆ ಮಾಡಿ ಈಚೆಗೆ ಬರುವಂತೆ ತಿಳಿಸಿದ ಯುವಕರಿಬ್ಬರು ನಂತರ ವಿದ್ಯಾರ್ಥಿನಿಯನ್ನು ಬಲವಂತವಾಗಿ  ಅತ್ಯಾಚಾರ ಮಾಡಿ ಮತ್ತೆ ವಾಪಸ್ ಪಟ್ಟಣಕ್ಕೆ ತಂದು ಬಿಟ್ಟಿದ್ದಾರೆ.

 ಕೆ.ಆರ್.ಪೇಟೆ : ಅಪ್ರಾಪ್ತ ಮೇಲೆ ಅತ್ಯಾಚಾರ ಪ್ರಕರಣದ ದೂರು ದಾಖಲಾದ ಕೇವಲ ಎರಡು ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

ಪಟ್ಟಣದ ವಸತಿ ನಿಲಯದಲ್ಲಿ ವಾಸವಿದ್ದ ವಿದ್ಯಾರ್ಥಿನಿಗೆ ಸ್ನೇಹಿತನನ್ನು ವಿಚಾರಿಸುವ ನೆಪದಲ್ಲಿ ಕರೆ ಮಾಡಿ ಈಚೆಗೆ ಬರುವಂತೆ ತಿಳಿಸಿದ ಯುವಕರಿಬ್ಬರು ನಂತರ ವಿದ್ಯಾರ್ಥಿನಿಯನ್ನು ಬಲವಂತವಾಗಿ ಹೊಸಹೊಳಲು ಸಮೀಪ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ ಮತ್ತೆ ವಾಪಸ್ ಪಟ್ಟಣಕ್ಕೆ ತಂದು ಬಿಟ್ಟಿದ್ದಾರೆ.

ಮಂಗಳವಾರ ಸಂಜೆ ನಾಲ್ಕು ಗಂಟೆ ಸಮಯದಲ್ಲಿ ಕೃತ್ಯ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಹಾಸ್ಟೆಲ್ ವಾರ್ಡನ್ ಬಳಿ ಘಟನೆ ವಿವರಿಸಿ ಪಟ್ಟಣ ಠಾಣೆಗೆ ದೂರು ಸಲ್ಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಕೂಡಲೇ ಕಾರ್ಯಾಚರಣೆ ಕೈಗೊಂಡ ಪೊಲಿಸರು ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಬಹಳ ಸೂಕ್ಷ್ಮ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಡಿವೈಎಸ್ಪಿ ಸುಮಿತ್ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನು ಕೇವಲ ಎರಡು ಗಂಟೆ ಅವಧಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದೆ.

ಕ್ಯಾಂಟರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸವಾರ ಸಾವು

ಮಳವಳ್ಳಿ:ಕ್ಯಾಂಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಪಟ್ಟಣದ ಪ್ರವಾಸಿ ಮಂದಿರದ ಬಳಿ ಬುಧವಾರ ನಡೆದಿದೆ.

ಮಂಡ್ಯ ತಾಲೂಕಿನ ಹಳೆ ಬೂದನೂರು ಗ್ರಾಮದ ಲೇ.ಸಿದ್ದೇಗೌಡರ ಪುತ್ರ ಬಿ.ಎಸ್.ಅರುಣ್ (22) ಮೃತಪಟ್ಟು, ಹಿಂಬದಿ ಸವಾರೆ ಸುಸ್ಮಿತಾ (22) ಗಾಯಗೊಂಡಿದ್ದಾರೆ.ಬುಧವಾರ ಬೆಳಗ್ಗೆ 6 ಗಂಟೆ ಸಮಯದಲ್ಲಿ ತಮ್ಮ ಬೈಕ್ ಅರುಣ್ ಸ್ನೇಹಿತೆ ಜತೆ ಕೊಳೇಗಾಲ ಮಾರ್ಗದತ್ತ ತೆರಳುತ್ತಿದ್ದ ವೇಳೆ ಎದುರುನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅರುಣ್ ಮತ್ತು ಸುಸ್ಮಿತಾ ಅವರನ್ನು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಅರುಣ್ ನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಗದೇ ಅರುಣ್ ಬುಧವಾರ ಸಂಜೆ ಮೃತಪಟ್ಟಿದ್ದಾರೆ. ಸುಸ್ಮಿತಾ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್ಐ ಮಹೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.