ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ  ತೀವ್ರವಾಗಿರುವ ಲಕ್ಷಣ ಕಂಡು ಬಂದಿದೆ

ಬೆಂಗಳೂರು: ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಆರೆಂಜ್‌ ಅಲರ್ಟ್‌ ಎಚ್ಚರಿಕೆ

ಈ ಪೈಕಿ ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಶೀತ ಅಲೆಯು ತೀವ್ರವಾಗಿರುವ ಲಕ್ಷಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಶೀತ ಅಲೆ ಇರಲಿದ್ದು, ಹೀಗಾಗಿ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಕನಿಷ್ಠ ಉಷ್ಣಾಂಶದಲ್ಲಿ ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆ ಕಂಡು ಬರಲಿದೆ.

ರಾಯಚೂರಿನಲ್ಲಿ ರಾಜ್ಯದ ಅತಿ ಕಡಿಮೆ ಕನಿಷ್ಠ ಉಷ್ಣಾಂಶ

ರಾಯಚೂರಿನಲ್ಲಿ ರಾಜ್ಯದ ಅತಿ ಕಡಿಮೆ ಕನಿಷ್ಠ ಉಷ್ಣಾಂಶ 9.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಮಾಹಿತಿ ನೀಡಿದೆ.