ರೇಣುಕಾಸ್ವಾಮಿಯ ಕೊಲೆ ಪ್ರಕರಣ : ಜಾಮೀನುಗಾಗಿ ದರ್ಶನ್ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ

| Published : Oct 16 2024, 11:14 AM IST / Updated: Oct 16 2024, 11:15 AM IST

south actor darshan thoogudeepa renuka swamy murder case

ಸಾರಾಂಶ

ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಜಾಮೀನುಗಾಗಿ ದರ್ಶನ್ ಹೈಕೋರ್ಟ್ ಮೊರೆಹೋಗಿದ್ದಾರೆ

ಬೆಂಗಳೂರು: ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಜಾಮೀನುಗಾಗಿ ದರ್ಶನ್ ಹೈಕೋರ್ಟ್ ಮೊರೆಹೋಗಿದ್ದಾರೆ. ಜಾಮೀನು ಮಂಜೂರು ಮಾಡಬೇಕು ಎಂದು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತ ಜಾಮೀನು ಅರ್ಜಿಯನ್ನು ದರ್ಶನ್ ಪರ ವಕೀಲ ಎಸ್. ಸುನಿಲ್ ಕುಮಾರ್‌ ಮಂಗಳವಾರ ಮಧ್ಯಾಹ್ನ 300 ಪುಟಗಳಿಗೂ ಅಧಿಕ ದಸ್ತಾವೇಜಿನ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.

ಮೆರಿಟ್ ಆಧಾರದಲ್ಲಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿರುವ ದರ್ಶನ್, ತನ್ನ ಆರೋಗ್ಯ ಸಮಸ್ಯೆಗಳನ್ನು ಅರ್ಜಿಯಲ್ಲಿ ವಿವರಿಸಿದ್ದಾರೆ. ತುರ್ತು ವೈದ್ಯಕೀಯ ಚಿಕಿತ್ಸೆಯ ಅಗತ್ಯವನ್ನೂ ಪ್ರತಿಪಾದಿಸಿದ್ದಾರೆ. ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ತಡವಾಗಿ ಮಾಡಿಕೊಳ್ಳಲಾಗಿದೆ. ಶವ ಪರೀಕ್ಷೆಯನ್ನು ಸಹ ವಿಳಂಬವಾಗಿ ಮಾಡಲಾಗಿದೆ. ಪ್ರತ್ಯ ಕ್ಷ ಸಾಕ್ಷಿದಾರರನ್ನು ತನಿಖಾಧಿಕಾರಿಗಳೇ ಸೃಷ್ಟಿಮಾಡಿದ್ದಾರೆ. ಅವರ ಹೇಳಿಕೆಗಳು ತದ್ವಿರುದ್ಧವಾಗಿದ್ದರೂ, ಅದನ್ನು ಪರಿಗಣಿಸುವಲ್ಲಿ ಸೆಷನ್ಸ್ ನ್ಯಾಯಾಲಯ ವಿಫಲವಾಗಿದೆ.

ಪೊಲೀಸರು ತನಿಖೆಯ ವೇಳೆಯಲ್ಲಿ ವಶಕ್ಕೆ ಪಡೆದು ಕೊಂಡಿರುವ ವಸ್ತುಗಳೆಲ್ಲಾ ಅವರೇ ಯೋಜಿಸಿ ಯಾರು ಮಾಡಿದ್ದಾರೆ ಎಂದು ಆಕ್ಷೇಪಿಸಿದ್ದಾರೆ. ಅಲ್ಲದೆ, ಪ್ರಕರಣದಲ್ಲಿ ಇತರೆ ಆರೋಪಿಗಳೊಂದಿಗೆ ತಾನು ಯಾವುದೇ ಒಳಸಂಚು ರೂಪಿಸಿಲ, ಆರೋಪಿಗಳ ಜೊತೆ ಕರೆಗಳನ್ನು ಮಾಡಿ ಸಂಚು ರೂಪಿಸಲಾಗಿದೆ ಎಂಬ ತನಿಖಾಧಿಕಾರಿಗಳ ಆರೋಪ ಸುಳ್ಳು. ಹಾಗೆಯೇ, ತಾವು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಅರ್ಜಿಯಲ್ಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಬಳ್ಳಾರಿ ಜೈಲಿಗೆ ಅರ್ಜಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಅವರ ಆರೋಗ್ಯ ಸ್ಥಿತಿ ಬಗ್ಗೆ ವರದಿ ನೀಡುವಂತೆ ದರ್ಶನ್ ಪರ ವಕೀಲರು ಕಾರಾಗೃಹದ ಅಧಿಕಾರಿಗಳಿಗೆ ಆರ್‌ಟಿಐ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ನಗರದ ಕೇಂದ್ರ ಕಾರಾಗೃಹದಲ್ಲಿರುವನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಇತ್ತೀಚೆಗೆ ಬಿಮ್ಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸೆ ತಜ್ಞ ಡಾ.ವಿಶ್ವನಾಥ್ ಅವರು ಜೈಲಿನಲ್ಲಿಯೇ ದರ್ಶನ್‌ ಅವರ ಆರೋಗ್ಯ ತಪಾಸಣೆ ನಡೆಸಿದ್ದರು.

ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಗೆ ಸಿಟಿ ಸ್ಕ್ಯಾನಿಂಗ್ ಹಾಗೂ ಎಂಆರ್‌ಐ ಸ್ಕಾ ಸ್ಕ್ಯಾನಿಂಗ್ ಮಾಡಿ ಚಿಕಿತ್ಸೆಗೆ ಒಳಪಡಿಸುವ ಅಗತ್ಯವಿದೆ ಎಂದು ಹೇಳಿದ್ದರು. ಆದರೆ, ದರ್ಶನ್ ಬಳ್ಳಾರಿಯಲ್ಲಿ ಚಿಕಿತ್ಸೆ ಪಡೆಯಲು ಹಿಂದೇಟು ಹಾಕುತ್ತಿದ್ದು, ಜೈಲು ಅಧಿಕಾರಿಗಳ ಮನವೊಲಿಕೆ ಸಾಧ್ಯವಾಗಿಲ್ಲ. ಇದೀಗ ದರ್ಶನ್ ಪರ ವಕೀಲ ಸುನಿಲಕುಮಾ‌ ಅವರು ದರ್ಶನ್ ಆರೋಗ್ಯದ ಕುರಿತು ಮಾಹಿತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ಇ-ಮೇಲ್ ಹಾಗೂ ಆರ್‌ಟಿಐ ಮೂಲಕ ಅರ್ಜಿ ಸಲ್ಲಿಸಿದ್ದು, ಇಂದು ವರದಿ ನೀಡುವ ಸಾಧ್ಯತೆ ಇದೆ. ಆರೋಗ್ಯವನ್ನೇ ನೆಪವಾಗಿಟ್ಟುಕೊಂಡು ಬಳ್ಳಾರಿಯಿಂದ ಬೆಂಗಳೂರು ಜೈಲಿಗೆ ಸ್ಥಳಾಂತರವಾಗುವ ರೂಪಿಸಲಾಗುತ್ತಿದೆ ಎನ್ನಲಾಗಿದೆ.