ಸಾರಾಂಶ
ಬೈಕ್‌ನಲ್ಲಿ ಅಪಾಯಕಾರಿಯಾಗಿ ವೀಲ್ಹಿಂಗ್ ಮಾಡುತ್ತಿದ್ದ ಸವಾರನನ್ನು ಬೆಂಗಳೂರಿನ ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಸಾಹಸ ಮಾಡುತ್ತಿದ್ದ ಸವಾರನನ್ನು ಮೈಕೋ ಲೇಔಟ್ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೊಮ್ಮನಹಳ್ಳಿಯ ಕಿಶನ್(25) ಬಂಧಿತ ಸವಾರ. ಶನಿವಾರ ಮಧ್ಯಾಹ್ನ ಸುಮಾರು 12.15ಕ್ಕೆ ಬಿಟಿಎಂ ಲೇಔಟ್ 4ನೇ ಹಂತದ ಆರ್‌ಟಿಓ ಕಚೇರಿ ಮುಖ್ಯರಸ್ತೆ ಕಡೆಯಿಂದ ವಿಜಯಾ ಬ್ಯಾಂಕ್ ಲೇಔಟ್ ಸರ್ಕಲ್ ಕಡೆಗೆ ಕಿಶನ್ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡಿಕೊಂಡು ಬರುತ್ತಿದ್ದ.
ಈ ವೇಳೆ ಕರ್ತವ್ಯನಿರತ ಸಂಚಾರ ಪೊಲೀಸರು ಕಿಶನ್‌ನನ್ನು ದ್ವಿಚಕ್ರ ವಾಹನ ಸಹಿತ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.