ಬೆಂಗಳೂರಿನ ಭಾರತೀನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ, ಕೆ.ಆರ್.ಪುರದ ಬಿಜೆಪಿ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಹೀಗಾಗಿ ಮಾಜಿ ಸಚಿವ ಬೈರತಿ ಬಸವರಾಜುಗೆ ಬಂಧನ ಭೀತಿ ಎದುರಾಗಿದ್ದು, ಯಾವುದೇ ಕ್ಷಣದಲ್ಲೂ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸುವ ಸಾಧ್ಯತೆಗಳಿವೆ. ಬಂಧನ ಭೀತಿಯಿಂದ ಸದ್ಯ ಶಾಸಕರು ನಾಪತ್ತೆಯಾಗಿದ್ದಾರೆ.
- ಬಿಕ್ಲು ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ- ಸೆರೆ ಭೀತಿಗೆ ಶಾಸಕ ನಾಪತ್ತೆ । ಸಿಐಡಿ ತಲಾಶ್ ।
---ಜು.15ರಂದು ಬೆಂಗಳೂರಲ್ಲಿ ದುಷ್ಕರ್ಮಿಗಳು ರೌಡಿ ಬಿಕ್ಲುವನ್ನು ಹಲ್ಲೆ ನಡೆಸಿ ಹತ್ಯೆಗೈದಿದ್ದರು
ಹತ್ಯೆಗೆ ಭೂ ವಿವಾದ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮೃತನ ತಾಯಿ ದೂರುದೂರಿನ ಹಿನ್ನೆಲೆಯಲ್ಲಿ ಶಾಸಕ ಬೈರತಿ ಬಸವರಾಜು ಸೇರಿ ಹಲವರ ಮೇಲೆ ಎಫ್‌ಐಆರ್ ದಾಖಲುಸಿಐಡಿಗೆ ತನಿಖೆಗೆ ಸರ್ಕಾರದ ಆದೇಶ. ಪ್ರಕರಣದಲ್ಲಿ 16 ಆರೋಪಿಗಳ ಬಂಧಿಸಿದ್ದ ತನಿಖಾ ಸಂಸ್ಥೆಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಬೈರತಿ ಬಸವರಾಜು. ಶುಕ್ರವಾರ ಅರ್ಜಿ ವಜಾ---ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರಿನ ಭಾರತೀನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ, ಕೆ.ಆರ್.ಪುರದ ಬಿಜೆಪಿ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಹೀಗಾಗಿ ಮಾಜಿ ಸಚಿವ ಬೈರತಿ ಬಸವರಾಜುಗೆ ಬಂಧನ ಭೀತಿ ಎದುರಾಗಿದ್ದು, ಯಾವುದೇ ಕ್ಷಣದಲ್ಲೂ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸುವ ಸಾಧ್ಯತೆಗಳಿವೆ. ಬಂಧನ ಭೀತಿಯಿಂದ ಸದ್ಯ ಶಾಸಕರು ನಾಪತ್ತೆಯಾಗಿದ್ದಾರೆ.ಇನ್ನು ಜಾಮೀನು ಅರ್ಜಿ ವಜಾಗೊಂಡ ವಿಚಾರ ತಿಳಿದ ಕೂಡಲೇ ಶಾಸಕ ಬೈರತಿ ಬಸವರಾಜು ಅವರ ಪತ್ತೆಗೆ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ಕಾರ್ಯಾಚರಣೆಗಿಳಿದಿದೆ. ಬೈರತಿಯಲ್ಲಿರುವ ಶಾಸಕರ ಮನೆ ಹಾಗೂ ಅವರ ಸಂಬಂಧಿಕರ ಮನೆಗಳಲ್ಲಿ ಸಿಐಡಿ ಹುಡುಕಾಟ ನಡೆಸಿದೆ. ಅಲ್ಲದೆ, ಚಳಿಗಾಲದ ಅಧಿವೇಶನದಲ್ಲಿ ಶಾಸಕರು ಪಾಲ್ಗೊಂಡಿರುವ ಮಾಹಿತಿ ಮೇರೆಗೆ ಬೆಳಗಾವಿ ನಗರದಲ್ಲಿ ಕೂಡ ಶಾಸಕರಿಗೆ ಸಿಐಡಿ ತಂಡ ಹುಡುಕಾಟ ನಡೆಸಿದೆ ಎಂದು ತಿಳಿದು ಬಂದಿದೆ.
ಜು.15 ರಂದು ಹಲಸೂರು ಕೆರೆ ಸಮೀಪ ಭಾರತೀನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಂದಿದ್ದರು. ಈ ಹತ್ಯೆಗೆ ಭೂ ವಿವಾದ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಬಳಿಕ ಮೃತನ ತಾಯಿ ನೀಡಿದ ದೂರಿನ ಮೇರೆಗೆ ಭಾರತೀನಗರ ಠಾಣೆಯಲ್ಲಿ ಶಾಸಕ ಬೈರತಿ ಬಸವರಾಜು ಹಾಗೂ ಅವರ ಆಪ್ತ ಹೆಣ್ಣೂರಿನ ಜಗದೀಶ್ ಅಲಿಯಾಸ್ ಜಗ್ಗ ಸೇರಿ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಪೂರ್ವ ವಿಭಾಗದ ಪೊಲೀಸರು 16 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿತ್ತು. ಆಗ ಹತ್ಯೆ ಬಳಿಕ ಬಂಧನ ಭೀತಿಯಿಂದ ದುಬೈಗೆ ಹಾರಿದ್ದ ಜಗ್ಗ ಮರಳಿದ ಕೂಡಲೇ ಸಿಐಡಿ ಬಂಧಿಸಿತ್ತು. ಪ್ರಕರಣದಲ್ಲಿ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಬೈರತಿ ಬಸವರಾಜು ನ್ಯಾಯಾಲಯದ ಮೊರೆ ಹೋಗಿದ್ದರು.