ಶಾಲಾ ಶುಲ್ಕ ಕಟ್ಟುವಂತೆ ಆಡಳಿತ ಮಂಡಳಿ ಕಿರುಕುಳ : ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!

| N/A | Published : Jul 06 2025, 01:48 AM IST / Updated: Jul 06 2025, 09:47 AM IST

dead body
ಶಾಲಾ ಶುಲ್ಕ ಕಟ್ಟುವಂತೆ ಆಡಳಿತ ಮಂಡಳಿ ಕಿರುಕುಳ : ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!
Share this Article
  • FB
  • TW
  • Linkdin
  • Email

ಸಾರಾಂಶ

ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಜರುಗಿದೆ.

  ಮದ್ದೂರು :  ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಜರುಗಿದೆ.

ಗ್ರಾಮದ ಅನಿಕೇತನ ವಿದ್ಯಾ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ಎಚ್.ಎಲ್.ಮಿಲನಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಇದೇ ಗ್ರಾಮದ ಲಕ್ಷ್ಮಿಪ್ರಸಾದ್ ಮತ್ತು ಎಚ್.ಎಸ್.ರಶ್ಮಿ ದಂಪತಿ ಪುತ್ರಿ ಎಚ್.ಎಲ್.ಮಿಲನಾ ಸೇರಿದಂತೆ ಇನ್ನಿಬ್ಬರೂ ಮಕ್ಕಳಾದ ಮೋಹಿತಾ 7ನೇ ತರಗತಿ, ಪುತ್ರ ಮೋಹಿತ್ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಮಿಲನಾ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗೆ ಆಯ್ಕೆಯಾಗಿದ್ದರೂ ಸಹ ಶಾಲೆ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ಶೈಲಜಾ ಸೇರಿದಂತೆ ಮೂವರು ಶಿಕ್ಷಕರು ಶಾಲಾ ಶುಲ್ಕ ಪಾವತಿ ಮಾಡುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು. ಪ್ರತಿನಿತ್ಯ ಬೆಳಗ್ಗೆ ಪ್ರಾರ್ಥನಾ ಸಮಯದಲ್ಲಿ ಭಾಗವಹಿಸಲು ಅವಕಾಶ ಕೊಡದೆ ಬಹಿಷ್ಕಾರ ಹಾಕಿದ್ದರು.

ಶನಿವಾರವೂ ಕೂಡ ಪ್ರಾರ್ಥನೆಗೆ ಅವಕಾಶ ಕೊಡದ ಕಾರಣ ಮಿಲನಾ ಮಧ್ಯಾಹ್ನ ಶಾಲೆ ಬಿಟ್ಟ ನಂತರ ತನ್ನ ಮನೆಗೆ ಧಾವಿಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮದ್ದೂರು ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಂತರ ಮೃತ ಬಾಲಕಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ದಲಿತ ಸಂಘಟನೆ ಮುಖಂಡರು ಆಗ್ರಹಿಸಿದ್ದಾರೆ.

Read more Articles on