ಸಾರಾಂಶ
ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಕ್ಯಾಪ್ಟನ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಜಾಜ್‌ಪುರ (ಒಡಿಶಾ): ಶಾಲೆಯಲ್ಲಿ ಶಿಕ್ಷಕಿ ಹೊಡೆಸಿದ ಬಸ್ಕಿಯಿಂದಾಗಿ ವಿದ್ಯಾರ್ಥಿಯೊಬ್ಬ ಅಸ್ವಸ್ಥನಾಗಿ ಮೃತಪಟ್ಟ ಘಟನೆ ಮಂಗಳವಾರ ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಒರಾಲಿ ಗ್ರಾಮದಲ್ಲಿದ್ದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ರುದ್ರ ನಾರಾಯಣ ಸೇಠಿ ಎಂಬ ಬಾಲಕ ತರಗತಿ ಅವಧಿಯಲ್ಲಿ ಹೊರಗಡೆ ಆಟವಾಡುತ್ತಿದ್ದನ್ನು ಕಂಡ ಶಿಕ್ಷಕಿ ಆತನಿಗೆ ಬಸ್ಕಿ ಹೊಡೆಯುವ ಶಿಕ್ಷೆ ನೀಡಿದರು. ಪರಿಣಾಮ ಬಾಲಕ ಮೂರ್ಛೆ ತಪ್ಪಿದ.ಇದನ್ನು ಕಂಡ ಸ್ಥಳೀಯರು ಆತನ ಪೋಷಕರಿಗೆ ಮಾಹಿತಿ ನೀಡಿ ಆತನನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿದರು. ಬಳಿಕ ಅಲ್ಲಿಂದ ಕಟಕ್ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಪೊಲೀಸರು ಹಾಗೂ ಬಿಇಓ ಅಧಿಕಾರಿಗಳು ಯಾವುದೇ ಅಧಿಕೃತ ದೂರು ಸ್ವೀಕರಿಸಿಲ್ಲ. ಕಾರಣ ತನಿಖೆ ಆರಂಭಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.