ತಾಯಿ ಸಾವಿನಿಂದ ಮನನೊಂದ ಮಗ ಕೆರೆ ಹಾರಿ ಆತ್ಮಹತ್ಯೆ..!

| Published : Nov 17 2025, 12:45 AM IST

ಸಾರಾಂಶ

ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಬಂಡಳ್ಳಿ ಬಳಿ ಇರುವ ಸಾಗ್ಯ ಗ್ರಾಮದ ಪರಶಿವಮೂರ್ತಿ ಅವರ ಪುತ್ರ ನವೀನ್ ಕುಮಾರ್ (25) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಕನ್ನಡಪ್ರಭ ವಾರ್ತೆ ಹಲಗೂರು

ಕೆಲವು ತಿಂಗಳ ಹಿಂದೆ ತಾಯಿ ಮರಣ ಹೊಂದಿದ್ದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಗೊಂಡ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ದೇವಿರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಬಂಡಳ್ಳಿ ಬಳಿ ಇರುವ ಸಾಗ್ಯ ಗ್ರಾಮದ ಪರಶಿವಮೂರ್ತಿ ಅವರ ಪುತ್ರ ನವೀನ್ ಕುಮಾರ್ (25) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ನವೀನ್ ಕುಮಾರ್ ಬೆಂಗಳೂರಿನಲ್ಲಿ ಜೀವನೋಪಯೋಗಕ್ಕಾಗಿ ಕೆಲಸ ಮಾಡಿಕೊಂಡಿದ್ದನು. ಕೆಲವು ತಿಂಗಳ ಹಿಂದೆ ಅವರ ತಾಯಿ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದನು. ಈತ ತಮ್ಮ ಸ್ವಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯ ಸಿಗುವ ಹಲಗೂರು ಸಮೀಪದ ದೇವಿರಹಳ್ಳಿ ಕೆರೆ ಬಳಿ ತಮ್ಮ ವಾಹನವನ್ನು ನಿಲ್ಲಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿನೆ.

ವಿಷಯ ತಿಳಿದ ಹಲಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಹೊರ ತೆಗೆದು ಶವ ಪರೀಕ್ಷೆ ನಡೆಸಿದ ನಂತರ ಶವವನ್ನು ವಾರಸುದಾರಿಗೆ ನೀಡಲಾಯಿತು. ಸಬ್ ಇನ್ಸ್ ಪೆಕ್ಟರ್ ಲೋಕೇಶ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.