ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಸಮೀಪದ ಪಾಂಡವಪುರ-ಶ್ರೀರಂಗಪಟ್ಟಣ ಹೆದ್ದಾರಿಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಲಾರಿಯೊಂದು ರಸ್ತೆ ಮಧ್ಯೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಹೈದರಾಬಾದ್ನಿಂದ ಕೇರಳದ ಕಣ್ಣೂರಿಗೆ ಟೈಲ್ಸ್ ಸಾಮಗ್ರಿಗಳನ್ನು ಸಾಗಾಟ ಮಾಡುತ್ತಿದ್ದ ಈ ಲಾರಿಯು ಅಪಘಾತಕ್ಕೊಳಗಾಗಿದ್ದು, ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ದರಸಗುಪ್ಪೆ ಸಮೀಪದ ಪಾಂಡವಪುರ-ಶ್ರೀರಂಗಪಟ್ಟಣ ಹೆದ್ದಾರಿಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಲಾರಿಯೊಂದು ರಸ್ತೆ ಮಧ್ಯೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.ಹೈದರಾಬಾದ್ನಿಂದ ಕೇರಳದ ಕಣ್ಣೂರಿಗೆ ಟೈಲ್ಸ್ ಸಾಮಗ್ರಿಗಳನ್ನು ಸಾಗಾಟ ಮಾಡುತ್ತಿದ್ದ ಈ ಲಾರಿಯು ಅಪಘಾತಕ್ಕೊಳಗಾಗಿದ್ದು, ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಸೋಮವಾರ ಮುಂಜಾನೆ ದಟ್ಟ ಮಂಜು ಕವಿದಿದ್ದು, ಪಾಂಡವಪುರ ಕಡೆಯಿಂದ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಸಾಗುತ್ತಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕಲು ಮುಂದಾದ ವೇಳೆ ಆಕಸ್ಮಿಕವಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ನಂತರ ವಿಭಜಕದ ಮೇಲೆಯೇ ಸುಮಾರು 100 ಮೀಟರ್ ಉಜ್ಜಿಕೊಂಡು ಹೋಗಿ ಬಳಿಕ ರಸ್ತೆ ಬಲ ಬದಿಗೆ ಅಪ್ಪಳಿಸಿ ಬಿದ್ದಿದೆ. ವಾಹನದ ಚಾಲಕ ಹಾಗೂ ಕ್ಲೀನರ್ಗೆ ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ರು. ಮೌಲ್ಯದ ಸಾಮಗ್ರಿಗಳು ಹಾನಿಯಾಗಿವೆ.ಪಾಂಡವಪುರ-ಶ್ರೀರಂಗಪಟ್ಟಣ ಮಾರ್ಗದ ಹೆದ್ದಾರಿಯನ್ನು ಇತ್ತೀಚೆಗೆ ಅಭಿವೃದ್ಧಿಗೊಳಿಸಿ, ಡಾಂಬರೀಕರಣ ಮಾಡಲಾಗಿದ್ದು, ಅಪಘಾತ ಉಂಟಾಗಿರುವ ಮೂಲೆ ಮಂಟಪ ಎಂಬ ಈ ಸ್ಥಳದಲ್ಲಿ ಕೆಲ ತಿಂಗಳ ಹಿಂದೆ ರಸ್ತೆ ವಿಭಜಕ ನಿರ್ಮಾಣ ಮಾಡಲಾಗಿದ್ದು, ಇದು ಸಂಪೂರ್ಣವಾಗಿ ಅವೈಜ್ಞಾನಿಕತೆಯಿಂದ ಕೂಡಿದೆ. ವಾಹನ ಚಾಲಕರಿಗೆ ರಸ್ತೆ ವಿಭಜಕವಿರುವ ಬಗ್ಗೆ ಅರಿವಿಲ್ಲದೆ ಅಪಘಾತಗಳು ಮರುಕಳಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಲದೇ, ಅಳವಡಿಸಿದ್ದ ಸೂಚನಾ ಫಲಕಗಳು ಸಹ ಮುರಿದು ಹೋಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಕ್ರಮ ವಹಿಸುವಂತೆ ವಾಹನ ಸವಾರರು ಹಾಗೂ ಸ್ಥಳಿಯರು ಆಗ್ರಹಿಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹಣಿ ಮಾಂಗಲ್ಯ ಸರ ಕಸಿದು ಪರಾರಿಮದ್ದೂರು:ಕಾರಿನಲ್ಲಿ ಬಂದ ದುಷ್ಕರ್ಮಿ ಮನೆ ಬಳಿ ವಾಕಿಂಗ್ ಮಾಡುತ್ತಿದ್ದ ಗೃಹಿಣಿಯ ಮಾಂಗಲ್ಯ ಸರ ಕಸಿದು ಪರಾರಿಯಾಗಿರುವ ಘಟನೆ ತಾಲೂಕಿನ ಬೋರಾಪುರ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಸುಷ್ಮಾ ಅವರ 1.50 ಲಕ್ಷ ರು. ಬೆಲೆಯ 11 ಗ್ರಾಂ ಮೌಲ್ಯದ ಮಾಂಗಲ್ಯ ಸರವನ್ನು ಲೂಟಿ ಮಾಡಲಾಗಿದೆ ಎಂದು ಆಕೆ ಪೊಲೀಸರಿಗೆ ದೂರು ನೀಡಿದ್ದಾರೆ. ಸುಷ್ಮಾ ಸಂಜೆ ಮನೆ ಬಳಿ ವಾಕಿಂಗ್ ಮಾಡುತ್ತಿದ್ದಾಗ ಇಂದಿನಿಂದ ಬಂದ ವ್ಯಕ್ತಿ ಆಕೆಯ ಕುತ್ತಿಗೆಗೆ ಕೈ ಹಾಕಿ ಸರವನ್ನು ಕಸಿದುಕೊಳ್ಳಲು ಯತ್ನಿಸಿದ್ದಾನೆ. ಇದರಿಂದ ಎಚ್ಚೆತ್ತುಕೊಂಡ ಆಕೆ ಒಂದು ಕೈಯಲ್ಲಿ ಸರವನ್ನು ಬಿಗಿಯಾಗಿ ಹಿಡಿದುಕೊಂಡು ಪ್ರತಿರೋಧ ವ್ಯಕ್ತಪಡಿಸಿದ ಪರಿಣಾಮ ದುಷ್ಕರ್ಮಿ ಅರ್ಧ ಸರವನ್ನು ಮಾತ್ರ ಲೂಟಿ ಮಾಡಿ ಮಾರುತಿ ಸ್ವಿಫ್ಟ್ ಕಾರ್ ನಲ್ಲಿ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ.