ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಲಾ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಶ್ರೀರಂಗಪಟ್ಟಣ ತಾಲೂಕಿನ ಬ್ರಹ್ಮಪುರ ಗ್ರಾಮದ ಹೃದಯ್ ರಾಜ್ ಪುತ್ರ ರೆಲ್ಬೀನ್ ಹೃದಯ್ (13) ಮೃತ ಬಾಲಕ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಲಾ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತಾಲೂಕಿನ ಬ್ರಹ್ಮಪುರ ಗ್ರಾಮದ ಹೃದಯ್ ರಾಜ್ ಪುತ್ರ ರೆಲ್ಬೀನ್ ಹೃದಯ್ (13) ಮೃತ ಬಾಲಕ.ತಾಲೂಕಿನ ನಗುವನಹಳ್ಳಿ ಗೇಟ್ ಬಳಿಯ ಸೆಂಟ್ ಫ್ರಾನ್ಸಿಸ್ಕೋ ಶಾಲೆಯಲ್ಲಿ ಮೃತ ರೆಲ್ವೀನ್ ಹೃದಯ್ 7ನೇ ತರಗತಿಯಲ್ಲಿ ಶಿಕ್ಷಣ ಪಡೆಯುತ್ತಿದ್ದನು. ಕಳೆದ ಅ.30ರ ಶುಕ್ರವಾರ ಬೆಳಗ್ಗೆ 8.30ರ ವೇಳೆ ಎಂದಿನಂತೆ ತನ್ನ ಸೈಕಲ್ನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಸರ್ವೀಸ್ ರಸ್ತೆ ದಾಟುವ ವೇಳೆ ಬೆಂಗಳೂರು ಕಡೆಯಿಂದ ವೇಗವಾಗಿ ಆಗಮಿಸಿದ ಬೃಹತ್ ಕಂಟೇನರ್ ಲಾರಿ ಡಿಕ್ಕಿಯಾಗಿ ಬಾಲಕ ರೆಲ್ವೀನ್ ಗಂಭೀರ ಗಾಯಗೊಂಡಿದ್ದಾನೆ.
ಈತನನ್ನು ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮುಂಜಾನೆ ಆಸ್ಪತ್ರೆ ಮೃತಪಟ್ಟಿದ್ದಾನೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಾಲಾ ಆಡಳಿತ ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ:
ತಮ್ಮ ಶಾಲೆಯ ವಿದ್ಯಾರ್ಥಿ ಹಾಗೂ ಸಹಪಾಠಿಯ ಸಾವಿನಿಂದ ಆಕ್ರೋಶಗೊಂಡ ಸೆಂಟ್ ಫ್ರಾನ್ಸಿಸ್ಕೋ ಶಾಲೆ ವಿದ್ಯಾರ್ಥಿಗಳು ಮತ್ತು ಶಾಲಾ ಆಡಳಿತ ಮಂಡಳಿ ಸರ್ವೀಸ್ ರಸ್ತೆಯಲ್ಲಿ ಉಬ್ಬು ನಿರ್ಮಿಸಿ ಮೇಲಿಂದ ಮೇಲೆ ಉಂಟಾಗುತ್ತಿರುವ ಅಪಘಾತಗಳಿಗೆ ಕಡಿವಾಣ ಹಾಕಲು ಆಗ್ರಹಿಸಿ ಪ್ರತಿಭಟಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.ಸರ್ವಿಸ್ ರಸ್ತೆಯಲ್ಲಿ ಮೃತ ಬಾಲಕನ ಶವವನ್ನ ಇಟ್ಟು ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಪೊಲೀಸರು ಪ್ರತಿಭಟಕಾರರ ಮನವೊಲಿಸಿ ಶನಿವಾರದ ಒಳಗೆ ರಸ್ತೆ ಉಬ್ಬು ಹಾಕಿಸಿಕೊಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.
ನಂತರ ಶಾಲೆ ಮುಂಭಾಗ ಮೃತ ಬಾಲಕನ ಶವವಿಟ್ಟು ಮೌನಾಚರಣೆ ಮಾಡಿ ಪೋಷಕರಿಗೆ ಒಪ್ಪಿಸಿದರು. ಮೃತ ವಿದ್ಯಾರ್ಥಿಯ ಪೊಲೀಸರು ಆಕ್ರಂದನ ಮುಗಿಲು ಮುಟ್ಟುವಂತಿತ್ತು.ಪ್ರತಿಭಟನೆಯಲ್ಲಿ ನಗುವನಹಳ್ಳಿ ಶಿವಸ್ವಾಮಿ, ಚಂದಗಾಲು ಮನು, ಪಾಲಹಳ್ಳಿ ಪ್ರದೀಪ್, ಸುಕನ್ಯಾ, ನಾಗಮ್ಮ ಸೇರಿದಂತೆ ಇತರ ಮುಖಂಡರು ಹೋರಾಟದಲ್ಲಿ ಧನಿಯಾಗಿ ಸರ್ವೀಸ್ ರಸ್ತೆಯಲ್ಲಿನ ಅಪಘಾತಗಳಿಗೆ ತಡೆ ಹಾಕಲು ಆಗ್ರಹಿಸಿದರು.ಸಾರಿಗೆ ಬಸ್ ಡಿಕ್ಕಿ: ಪಾದಚಾರಿ ಸಾವು, ಬೈಕ್ ಸವಾರನಿಗೆ ಗಾಯ
ಶ್ರೀರಂಗಪಟ್ಟಣ: ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಪಾದಚಾರಿ ಹಾಗೂ ಬೈಕ್ಗೆ ಸರ್ಕಾರಿ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟು, ಬೈಕ್ ಸವಾರನಿಗೆ ಗಂಭೀರವಾಗಿರುವ ಘಟನೆ ತಾಲೂಕಿನ ದರಸಗುಪ್ಪೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಪಾದಚಾರಿ ಶಿವಣ್ಣಾಚಾರಿ (80) ಮೃತಪಟ್ಟವರು. ಗಂಜಾಂ ಗ್ರಾಮದ ನಿರಂಜನ್ (20) ಬೈಕ್ ಸವಾರ ಗಂಭೀರ ಸ್ಥಿತಿಯಲ್ಲಿ ಇದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾನೆ. ಪಾಂಡವಪುರ ಕಡೆಯಿಂದ ಮೈಸೂರಿಗೆ ಹೋಗುವ ಸಾರಿಗೆ ಬಸ್, ದರಸಗುಪ್ಪೆ ಗ್ರಾಮದ ಬಳಿಯ ಬ್ಯಾಂಕ್ ಮುಂಭಾಗ ನಡೆದು ಹೋಗುತ್ತಿದ್ದ ಪಾದಚಾರಿ ಹಾಗೂ ಬೈಕ್ಗೆ ಡಿಕ್ಕಿಹೊಡೆದು ಈ ಘಟನೆ ಸಂಭವಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.ಬಸ್ ಡಿಕ್ಕಿಯಾಗಿ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ಸಂಬಂದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.