ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

| Published : Nov 25 2023, 01:15 AM IST

ಸಾರಾಂಶ

ಗಣಿತ ವಿಷಯದಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಆತ್ಮಹತ್ಯೆ

ಬೈಲಹೊಂಗಲ: ಎಸ್ಸೆಸ್ಸೆಲ್ಸಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಘಟನೆ ಶುಕ್ರವಾರ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಎಂ.ಜೆ.ಹೌಸಿಂಗ್ ಕಾಲೋನಿ ನಿವಾಸಿ ಪೂಜಾ ರಾಜೇಶೇಖರ ಹಿರೇಮಠ (15) ಮೃತ ವಿದ್ಯಾರ್ಥಿನಿ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.