ಸಾರಾಂಶ
ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.
ಬೆಂಗಳೂರು ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.
ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.
ಮದುವೆಯಾಗಿದ್ದ ಶ್ರೀಕಾಂತ್!
ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.