ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ಹಾಕಿ ಕೊಲೆ ಯತ್ನ: ಬಂಧನ

| Published : May 07 2024, 02:01 AM IST / Updated: May 07 2024, 05:07 AM IST

ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ಹಾಕಿ ಕೊಲೆ ಯತ್ನ: ಬಂಧನ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಿಗೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯ ಶೀಲ ಶಂಕಿಸಿ ಆಕೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.

 ಬೆಂಗಳೂರು :    ದುರುಳ ಪತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಆಕೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿರುವ ಅಮಾನುಶ ಘಟನೆ ಕೊಡಿಗೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಿಂಡ್ಲು ಸರ್ಕಲ್ ನಿವಾಸಿ ದೀಪಿಕಾ (28) ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸ್ಥಿತಿ ಗಂಭೀರ ವಾಗಿದೆ. ಇನ್ನು ಕೊಲೆಗೆ ಯತ್ನಿಸಿದ ಆರೋಪದಡಿ ಆಕೆಯ ಪತಿ ಅನಿಲ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಅನಿಲ್ ಮತ್ತು ದೀಪಿಕಾ ಹತ್ತು ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅನಿಲ್ ಪೇಟಿಂಗ್ ಕೆಲಸ ಮಾಡಿದರೆ, ದೀಪಿಕಾ ಮನೆ ಕೆಲಸ ಮಾಡುತ್ತಿದ್ದರು. ಈ ನಡುವೆ ಆಕೆಯ ಶೀಲ ಶಂಕಿಸಿ ಅನಿಲ್‌ ಮನೆಯಲ್ಲಿ ಆಗಾಗ ಗಲಾಟೆ ಮಾಡುತ್ತಿದ್ದ. ಭಾನುವಾರ ರಾತ್ರಿ ಸಹ ಇದೇ ವಿಚಾರಕ್ಕೆ ದಂಪತಿ ನಡುವೆ ಗಲಾಟೆಯಾಗಿದೆ.

ಮದ್ಯದ ಅಮಲಿನಲ್ಲಿದ್ದ ಅನಿಲ್‌, ಪತ್ನಿ ದೀಪಿಕಾ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ದೀಪಿಕಾಳನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಸೇರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿ ಅನಿಲ್‌ನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕೊಲೆಗೆ ಯತ್ನ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.