ಸಾರಾಂಶ
ನಗರದಲ್ಲಿ ಸರಗಳ್ಳತನ ಮಾಡಿದ್ದ ಕಿಡಿಗೇಡಿಯೊಬ್ಬನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ನಗರದಲ್ಲಿ ಸರಗಳ್ಳತನ ಮಾಡಿದ್ದ ಕಿಡಿಗೇಡಿಯೊಬ್ಬನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕಾಳಿಕನಗರದ ಶ್ರೀಧರ್‌ನಿಂದ 13 ಗ್ರಾಂ ಚಿನ್ನದ ಸರ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ. ತಪ್ಪಿಸಿಕೊಂಡಿರುವ ಶ್ರೀಧರ್‌ನ ಸಹಚರ ಆನಂದ್ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕೆಲ ದಿನಗಳ ಹಿಂದೆ ಅಂದ್ರಹಳ್ಳಿಯ ಚಕ್ರನಗರದ ಮುಖ್ಯರಸ್ತೆ ಬಳಿ ಕುಡಿಯುವ ನೀರು ಘಟಕದಲ್ಲಿ ಕ್ಯಾನ್‌ಗೆ ನೀರು ತುಂಬಿಸಿಕೊಳ್ಳುತ್ತಿದ್ದ ಪ್ರತಾಪ್ ಅವರಿಂದ ಚಿನ್ನದ ಸರ ಕಸಿದು ಆರೋಪಿಗಳು ಪರಾರಿಯಾಗಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಶ್ರೀಧರ್‌ನನ್ನು ಸೆರೆ ಹಿಡಿದಿದ್ದಾರೆ. ಶ್ರೀಧರ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಆತನ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ತನ್ನ ಸ್ನೇಹಿತ ಆನಂದ್ ಜತೆ ಸೇರಿ ಸರಗಳ್ಳತನಕ್ಕಿಳಿದಿದ್ದ ಎಂದು ಪೊಲೀಸರು ಹೇಳಿದ್ದಾರೆ.